ಬೆಂಗಳೂರು : ರಾಜ್ಯ ಮಹಿಳಾ & ಮಕ್ಕಳ ಅಭಿವೃದ್ಧಿ ಇಲಾಖೆ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಅರ್ಜಿ ಸಲ್ಲಿಸಲು ಫೆಬ್ರವರಿ 15 ಕೊನೆಯ ದಿನವಾಗಿದೆ.
ಒಟ್ಟು 152 ಅಂಗನವಾಡಿ ಕಾರ್ಯಕರ್ತೆ ಮತ್ತು ಅಂಗನವಾಡಿ ಸಹಾಯಕಿ ಹುದ್ದೆಗಳು ಖಾಲಿ ಇದ್ದು, ಫೆಬ್ರವರಿ 15, 2024 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಒಟ್ಟು 6 ಜಿಲ್ಲೆಗಳಲ್ಲಿ ನೇಮಕಾತಿ ಮಾಡಲಾಗುತ್ತಿದೆ.
ಬೆಂಗಳೂರು ಗ್ರಾಮೀಣ ಜಿಲ್ಲೆ, ಬೆಂಗಳೂರು ನಗರ ಜಿಲ್ಲೆ, ಬೆಳಗಾವಿ, ಬೀದರ್, ಹಾವೇರಿ , ತುಮಕೂರಿನಲ್ಲಿ ಹುದ್ದೆಗಳು ಖಾಲಿಯಿದೆ. ಅಂಗನವಾಡಿ ಕಾರ್ಯಕರ್ತೆ -39 ಹುದ್ದೆ ಹಾಗೂ ಅಂಗನವಾಡಿ ಸಹಾಯಕಿ – 113 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಅಂಗನವಾಡಿ ಕಾರ್ಯಕರ್ತೆಯ ಹುದ್ದೆಗೆ ದ್ವಿತೀಯ ಪಿಯುಸಿ ತೇರ್ಗಡೆ ಹೊಂದಿರಬೇಕು ಹಾಗೂ ಎಸ್ಎಸ್ಎಲ್ಸಿ ಯಲ್ಲಿ ಕನ್ನಡ ಭಾಷೆಯನ್ನು ಪ್ರಥಮ ಅಥವಾ ದ್ವಿತೀಯ ಭಾಷೆಯನ್ನಾಗಿ ಓದಿರಬೇಕು. ಹೆಚ್ಚಿನ ಮಾಹಿತಿಗಾಗಿ https://anganwadirecruit.kar.nic.in/ ಭೇಟಿ ನೀಡಬಹುದಾಗಿದೆ.