![](https://kannadadunia.com/wp-content/uploads/2024/02/farmer-1.jpg)
ಬೆಂಗಳೂರು : ರಾಜ್ಯದ ರೈತರಿಗೆ ಸರ್ಕಾರವು ಸಿಹಿಸುದ್ದಿ ನೀಡಿದ್ದು, ರಾಜ್ಯ ಸರ್ಕಾರವು ಈಗಾಗಲೇ ಅರ್ಹ ರೈತರಿಗೆ ಬರ ಪರಿಹಾರ ಬಿಡುಗಡೆ ಮಾಡಿದ್ದು, ಗ್ರಾಮಪಂಚಾಯಿತಿಗಳಲ್ಲಿ ಪಟ್ಟಿ ಪ್ರಕಟಿಸಲಾಗಿದೆ.
ಈ ಕುರಿತು ಕಂದಾಯ ಸಚಿವ ಕೃಷ್ಣ ಬೈರೇಗೌಡ ಮಾಹಿತಿ ನೀಡಿದ್ದು, ಅರ್ಹ ರೈತರಿಗೆ ಬರ ಪರಿಹಾರ ತಲುಪಿಸಿ ವ್ಯವಸ್ಥೆಯಲ್ಲಿ ಪಾರದರ್ಶಕತೆ ಕಾಯ್ದುಕೊಳ್ಳುವ ದೃಷ್ಟಿಯಿಂದ ಈ ಕುರಿತ ಪಟ್ಟಿಯನ್ನು ಎಲ್ಲ ಗ್ರಾಮ ಪಂಚಾಯಿತಿಗಳಲ್ಲಿ ಪ್ರಕಟಿಸಲಾಗಿದೆ. ರೈತರು ಸಂಬಂಧಿಸಿದ ಗ್ರಾಮ ಪಂಚಾಯಿತಿಗಳಲ್ಲಿ ಪಟ್ಟಿ ಪರಿಶೀಲಿಸಬಹುದು. ಹೆಸರು ಬಿಟ್ಟು ಹೋಗಿದ್ದರೆ ಸಮೀಪದ ರೈತ ಸಂಪರ್ಕ ಕೇಂದ್ರ ಅಥವಾ ಕಂದಾಯ ಇಲಾಖೆಯ ಸ್ಥಳೀಯ ಕಚೇರಿಗೆ ಭೇಟಿ ನೀಡಿ ಸೇರ್ಪಡೆ ಮಾಡಿಸಿಕೊಳ್ಳಬೇಕು ಎಂದು ತಿಳಿಸಿದ್ದಾರೆ.