HomeKarnatakaಕುರಿ,ಮೇಕೆ ಸಾಕಾಣಿಕೆಗಾಗಿ ಸಾಲ ಮತ್ತು ಸಹಾಯಧನಕ್ಕಾಗಿ ಅರ್ಜಿ ಆಹ್ವಾನ

ಕುರಿ,ಮೇಕೆ ಸಾಕಾಣಿಕೆಗಾಗಿ ಸಾಲ ಮತ್ತು ಸಹಾಯಧನಕ್ಕಾಗಿ ಅರ್ಜಿ ಆಹ್ವಾನ

ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮ ಹಾಗೂ ಕರ್ನಾಟಕ ಸಹಕಾರ ಕುರಿ ಮತ್ತು ಮೇಕೆಗಳ ಸಾಕಾಣಿಕೆದಾರರ ಸಂಘಗಳ ಮಹಾಮಂಡಳಗಳೊಂದಿಗೆ ಸಂಯೋಜನೆಗೊಂಡಿರುವ ಒಟ್ಟು ಏಳು ಸಂಘಗಳ ಸದಸ್ಯರುಗಳಲ್ಲಿ ಅಮೃತ ಸ್ವಾಭಿಮಾನಿ ಕುರಿಗಾಹಿ ಯೋಜನೆಯಡಿಯಲ್ಲಿ (20+1) ಕುರಿ,ಮೇಕೆ ಸಾಕಾಣಿಕೆಗಾಗಿ ಸಾಲ ಮತ್ತು ಸಹಾಯಧನಕ್ಕೆ ಅರ್ಜಿಯನ್ನು ಆಹ್ವಾನಿಸಲಾಗಿದೆ.

ಕುರಿಗಾಹಿಗಳು ಫೆಬ್ರವರಿ 19, 2024 ರೊಳಗಾಗಿ ಸಂಘದ ಅಧ್ಯಕ್ಷರು ಹಾಗೂ ಕಾರ್ಯದರ್ಶಿಗಳ ಮೂಲಕ ನಿಗದಿತ ಅರ್ಜಿಯನ್ನು ದಾಖಲಾತಿಗಳೊಂದಿಗೆ ನಿಗಮದ ಕಛೇರಿಗೆ ಸಲ್ಲಿಸಬೇಕು.  ಈ ಯೋಜನೆಯು ಸಂಘದ ಸದಸ್ಯರಿಗೆ ಮಾತ್ರ ಸೀಮಿತಗೊಂಡಿರುತ್ತದೆ ಎಂದು ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮದ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular