ಗದಗ : ಗದಗ ಜಿಲ್ಲೆಯ ರೋಣ ತಾಲೂಕಿನ ಹಿರೇಹಾಳ ಗ್ರಾಮದಲ್ಲಿ ಕಾಂಗ್ರೆಸ್ ಮುಖಂಡನ ಹೆಸರು ಬರೆದಿಟ್ಟು ವ್ಯಕ್ತಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
ಕಾಂಗ್ರೆಸ್ ಮುಖಂಡ ಡಾ. ಶಶಿಧರ್ ಎಂಬಾತ ಮರಳುದಂಧೆಗೆ ಬಲಿಯಾಗಿದ್ದು, ಕಾಂಗ್ರೆಸ್ ಮುಖಂಡ ಶರಣಗೌಡ ಪಾಟೀಲ್ ಹೆಸರು ಬರೆದಿಟ್ಟು ಪಂಚೆಯಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಕಾಂಗ್ರೆಸ್ ಮುಖಂಡ ಶರಣಗೌಡ ಪಾಟೀಲ್ ಹೆಸರನ್ನು ಬರೆದು ಶಶಿಧರ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮರಳು ದಂಧೆಕೋರ ಶರಣಗೌಡ ಪಾಟೀಲ್ ವಿರುದ್ಧ ಕಿರುಕುಳ ಆರೋಪ ಮಾಡಿದ್ದು ಎಲ್ಲಾ ಲೆಕ್ಕ ಕೊಟ್ಟರು ಕಿರುಕುಳ ನೀಡುತ್ತಿದ್ದಾರೆ. ಆದ್ದರಿಂದ ಶರಣಗೌಡ ಗೆ ಕಠಿಣ ಶಿಕ್ಷೆ ಕೊಡಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವ ಎಚ್ ಕೆ ಪಾಟೀಲ್ ಗೆ ಹೇಳಿ ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿದೆ. ಘಟನೆ ಕುರಿತಂತೆ ರೋಣ ತಾಲೂಕು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.