ಬೆಂಗಳೂರು: ಇತ್ತೀಚಿನ ದಿನಗಳಲ್ಲಿ ಅಪ್ರಾಪ್ತ ಮಕ್ಕಳು ದ್ವಿಚಕ್ರವಾಹನ, ಕಾರು ಚಲಾಯಿಸುವ ಪ್ರಕರಣಗಳು ಹೆಚ್ಚುತ್ತಿವೆ. ಅಪ್ರಾಪ್ತ ಮಕ್ಕಳಿಗೆ ವಾಹನ ನೀಡುವ ಪೋಷಕರಿಗೆ ಸಂಚಾರಿ ಪೊಲೀಸರು ಭಾರಿ ದಂಡ ವಿಧಿಸುವ ಮೂಲಕ ಕಟ್ಟುನಿಟ್ಟಿನ ಕ್ರಮಕೈಗೊಂಡಿದ್ದಾರೆ ಸಂಚಾರಿ ಪೊಲೀಸರು.
ನಿಯಮ ಮೀರಿ ವಾಹನ ಚಲಾಯಿಸಿ ಅಪಘಾತ ಮಾಡಿದ 6 ಅಪ್ರಾಪ್ತ ಮಕ್ಕಳ ಪೋಷಕರಿಗೆ ತಲಾ 25,000 ರೂಪಾಯಿ ದಂಡ ವಿಧಿಸಿರುವ ಘಟನೆ ಬೆಂಗಳೂರಿನ ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಯಾವುದೇ ಮಾರಣಾಂತಿಕ ಅಪಘಾತವಾಗಿರಲಿಲ್ಲ. ಆದಾಗ್ಯೂ ಅಪ್ರಾಪ್ತ ಮಕ್ಕಳಿಗೆ ವಾಹನ ನೀಡಿದ ತಪ್ಪಿಗೆ ಪ್ರಕರಣ ಸಂಬಂಧ 6 ಮಕ್ಕಳ ಪೋಷಕರು ಕೋರ್ಟ್ ಗೆ ಹಾಜರಾಗಿದ್ದು, ಅಪ್ರಾಪ್ತ ಮಕ್ಕಳಿಗೆ ವಾಹನ ಚಲಾಯಿಸಲು ಅವಕಾಶ ಕೊಟ್ಟಿದ್ದಕ್ಕಾಗಿ ಕೋರ್ಟ್ ತಲಾ 25,000 ರೂಪಾಯಿ ದಂಡ ವಿಧಿಸಿದೆ. ಪೋಷಕರು ಬರೋಬ್ಬರಿ 1.5 ಲಕ್ಷ ರೂಪಾಯಿ ದಂಡ ತೆತ್ತಿದ್ದಾರೆ.