ಹಿಂದುಳಿದ ವಿದ್ಯಾರ್ಥಿಗಳ ಗಮನಕ್ಕೆ : ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸಲು ಫೆ.15 ಕೊನೆಯ ದಿನ

ಬೆಂಗಳೂರು : ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಪ್ರವರ್ಗ-1 ಅಲೆಮಾರಿ, ಅರೆ ಅಲೆಮಾರಿ ವಿದ್ಯಾರ್ಥಿಗಳಿಂದ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲಾಗಿದ್ದು, ಅರ್ಜಿ ಸಲ್ಲಿಸಲು ಫೆ.15 ಕೊನೆಯ ದಿನವಾಗಿದೆ.

ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಪ್ರವರ್ಗ-1 ಅಲೆಮಾರಿ, ಅರೆ ಅಲೆಮಾರಿ ವಿದ್ಯಾರ್ಥಿಗಳಿಂದ, 2023-24ನೇ ಸಾಲಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೂಲಕ ನೀಡಲಾಗುತ್ತಿರುವ “ಮೆಟ್ರಿಕ್-ನಂತರದ ವಿದ್ಯಾರ್ಥಿವೇತನ”, “ಶುಲ್ಕ ಮರುಪಾವತಿ” ಮತ್ತು “ವಿದ್ಯಾಸಿರಿ-ಊಟ ಮತ್ತು ವಸತಿ ಸಹಾಯ ಯೋಜನೆ”, ಸೌಲಭ್ಯಕ್ಕಾಗಿ ಆನ್ಲೈನ್ ಮೂಲಕ ಈಗಾಗಲೇ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸುವ ಅಂತಿಮ ದಿನಾಂಕವನ್ನು ಫೆ.15 ರ ವರೆಗೆ ವಿಸ್ತರಿಸಲಾಗಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಪ್ರಕಟಣೆ ಹೊರಡಿಸಿದೆ.

ಅರ್ಜಿ ಸಲ್ಲಿಸುವ ದಿನಾಂಕವನ್ನು ವಿಸ್ತರಿಸುವಂತೆ ಪೋಷಕರು, ವಿದ್ಯಾರ್ಥಿಗಳು, ಶಿಕ್ಷಣ ಸಂಸ್ಥೆಗಳು ಮನವಿ ಸಲ್ಲಿಸಿದ್ದು, ಪ್ರಯುಕ್ತ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕವನ್ನು ವಿಸ್ತರಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಡಿ.ದೇವರಾಜ ಅರಸು ಭವನದ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಅಧಿಕಾರಿಗಳ ಕಚೇರಿ ಅಥವಾ ಆಯಾ ಹಿಂದುಳಿದ ತಾಲೂಕು ಕಚೇರಿಯನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆ ಹೊರಡಿಸಲಾಗಿದೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read