ಬೆಂಗಳೂರು : ಪರಿಶಿಷ್ಟ ಜಾತಿಯ ಪತ್ರಕರ್ತರಿಗೆ ಎಲೆಕ್ಟ್ರಾನಿಕ್ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಉದ್ಯಮ ಸ್ಥಾಪನೆಗೆ ಸಹಾಯಧನ ಯೋಜನೆಗೆ ಅರ್ಜಿ ಆಹ್ವಾನಿಸಲಾಗಿದೆ.
ಪರಿಶಿಷ್ಟ ಜಾತಿಯ ಪತ್ರಕರ್ತರಿಗೆ ಎಲೆಕ್ಟ್ರಾನಿಕ್ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಉದ್ಯಮ ಸ್ಥಾಪನೆಗೆ ಸಹಾಯಧನ ಯೋಜನೆಯಡಿ ಪರಿಶಿಷ್ಟ ಜಾತಿಯ ಯಾವುದೇ ಪದವಿ ಪಡೆದು ಎಲೆಕ್ಟ್ರಾನಿಕ್ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ 10 ವರ್ಷಗಳ ಸೇವಾನುಭವ ಹೊಂದಿರುವ ಹಾಗೂ ವಾರ್ತಾ ಇಲಾಖೆಯ ಮಾಧ್ಯಮ ಪಟ್ಟಿಯಲ್ಲಿರುವ ಪ್ರಮುಖ ಮಾಧ್ಯಮ ಮುದ್ರಣ ಅಥವಾ ಎಲೆಕ್ಟ್ರಾನಿಕ್ ಮಾಧ್ಯಮದಲ್ಲಿ ಹೆಸರು ನಮೂದಿಸಿರುವ ಪತ್ರಕರ್ತರು ಅರ್ಜಿ ಸಲ್ಲಿಸಲು ಅರ್ಹತೆ ಹೊಂದಿರುತ್ತಾರೆ.
ಈ ಸಂಬಂಧ ಪ್ರಾಯೋಗಿಕವಾಗಿ ಬೆಂಗಳೂರು ಮಹಾನಗರ ಪಾಲಿಕೆ ಮತ್ತು ರಾಜ್ಯದ ಇತರೆ ಮಹಾನಗರ ಪಾಲಿಕೆಗಳಲ್ಲಿ ಈ ಯೋಜನೆಯನ್ನು ಜಾರಿಗೊಳಿಸಲಾಗಿದೆ. ಪತ್ರಕರ್ತರು ಇಲಾಖೆಯ ವೆಬ್ಸೈಟ್ www.sw.kar.nic.in ನಲ್ಲಿ ಅರ್ಜಿ ನಮೂನೆಯನ್ನು ಡೌನ್ಲೋಡ್ ಮಾಡಿಕೊಂಡು ಭರ್ತಿ ಮಾಡಿದ ಅರ್ಜಿಯನ್ನು ಉಪ ನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ, ಕೊಡಗು ಜಿಲ್ಲೆ, ಮಡಿಕೇರಿ ಇವರಿಗೆ ಫೆಬ್ರವರಿ, 26 ರ ಸಂಜೆ 5.30 ಗಂಟೆಯೊಳಗೆ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗೆ ಇಲಾಖೆಯ ದೂ.ಸಂ. 08272-225531 ನ್ನು ಸಂಪರ್ಕಿಸಬಹುದು ಎಂದು ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರಾದ ಶೇಖರ್ ಅವರು ತಿಳಿಸಿದ್ದಾರೆ.