HomeKarnataka7 ಲಕ್ಷ ಮೇವಿನ ಬಿತ್ತನೆ ಬೀಜದ ಕಿಟ್ ವಿತರಣೆಗೆ ರಾಜ್ಯ ಸರ್ಕಾರದಿಂದ ಅನುದಾನ ಬಿಡುಗಡೆ

7 ಲಕ್ಷ ಮೇವಿನ ಬಿತ್ತನೆ ಬೀಜದ ಕಿಟ್ ವಿತರಣೆಗೆ ರಾಜ್ಯ ಸರ್ಕಾರದಿಂದ ಅನುದಾನ ಬಿಡುಗಡೆ

ಬೆಂಗಳೂರು : ಮೇವಿನ ಸಮಸ್ಯೆ ನಿವಾರಣೆಗೆ ರಾಜ್ಯ ಸರ್ಕಾರ ಕ್ರಮ ಕೈಗೊಂಡಿದ್ದು, 7 ಲಕ್ಷ ಮೇವಿನ ಬಿತ್ತನೆ ಬೀಜದ ಕಿಟ್ ವಿತರಣೆ ಮಾಡಲಾಗಿದೆ.

ಮೇವಿನ ಸಮಸ್ಯೆ ನಿವಾರಣೆಗೆ ರಾಜ್ಯ ಸರ್ಕಾರ ಹಲವು ಕ್ರಮಗಳನ್ನು ಕೈಗೊಂಡಿದೆ. ರಾಜ್ಯದಲ್ಲಿ ಈಗಾಗಲೇ 3 ಕಡೆ ಗೋಶಾಲೆಗಳನ್ನು ತೆರೆಯಲಾಗಿದೆ. 2023, ನವೆಂಬರ್ ತಿಂಗಳಲ್ಲೇ 7 ಲಕ್ಷ ಮೇವಿನ ಬಿತ್ತನೆ ಬೀಜದ ಕಿಟ್ಗಳನ್ನು ರೈತರಿಗೆ ಉಚಿತವಾಗಿ ವಿತರಿಸಲಾಗಿದೆ.

ಜನವರಿ, ಫೆಬ್ರವರಿ ಬಳಿಕ ಮೇವಿನ ಸಮಸ್ಯೆ ಎದುರಾಗಬಹುದು ಎಂದು ಯೋಚಿಸಿ ಸರ್ಕಾರ ಮೊದಲೇ ಕಿಟ್ ವಿತರಿಸಿದೆ. ಎರಡನೇ ಹಂತದ ಕ್ರಮವಾಗಿ 7 ಲಕ್ಷ ಮೇವಿನ ಬಿತ್ತನೆ ಬೀಜದ ಕಿಟ್ಗಳನ್ನು ರೈತರಿಗೆ ವಿತರಿಸಲು ಪಶುಸಂಗೋಪನೆ ಇಲಾಖೆಗೆ ಹಣ ಬಿಡುಗಡೆ ಮಾಡಲಾಗಿದೆ ಎಂದು ಸರ್ಕಾರ ಪ್ರಕಟಣೆ ಹೊರಡಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular