alex Certify BREAKING : ಡಿಸಿಎಂ ಡಿ.ಕೆ ಶಿವಕುಮಾರ್ ಗೆ ಮತ್ತೊಂದು ಸಂಕಷ್ಟ : ಲೋಕಾಯುಕ್ತ ಪೊಲೀಸರಿಂದ ‘FIR’ ದಾಖಲು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಡಿಸಿಎಂ ಡಿ.ಕೆ ಶಿವಕುಮಾರ್ ಗೆ ಮತ್ತೊಂದು ಸಂಕಷ್ಟ : ಲೋಕಾಯುಕ್ತ ಪೊಲೀಸರಿಂದ ‘FIR’ ದಾಖಲು

ಬೆಂಗಳೂರು : ಡಿಸಿಎಂ ಡಿ.ಕೆ ಶಿವಕುಮಾರ್ ಗೆ ಮತ್ತೊಂದು ಸಂಕಷ್ಟ ಎದುರಾಗಿದ್ದು, ಲೋಕಾಯುಕ್ತ ಪೊಲೀಸರು ‘FIR’ ದಾಖಲು ಮಾಡಿದ್ದಾರೆ.

ಡಿಸಿಎಂ ಡಿಕೆ ಶಿವಕುಮಾರ್ ವಿರುದ್ಧದ ಅಕ್ರಮ ಆಸ್ತಿಗಳಿಕೆ ಪ್ರಕರಣವನ್ನು ರಾಜ್ಯ ಸರ್ಕಾರದಿಂದ ಸಿಬಿಐ ತನಿಖೆಗೆ ವಹಿಸಿದ್ದನ್ನು ಹಿಂಪಡೆಯಲಾಗಿತ್ತು. ಇದೀಗ ಸಿಬಿಐಯಲ್ಲಿ ಇದ್ದಂತ ಪ್ರಕರಣವನ್ನು ಲೋಕಾಯುಕ್ತದಿಂದ ಮರು ತನಿಖೆ ಶುರು ಮಾಡಲಾಗಿದೆ.

ಸಿಬಿಐಯಲ್ಲಿದ್ದ ಪ್ರಕರಣವನ್ನು ಮರು ತನಿಖೆಗೆ ಲೋಕಾಯುಕ್ತ ಎಫ್ಐಆರ್ ದಾಖಲಿಸಿಕೊಂಡಿದ್ದು, ಪ್ರಕರಣಕ್ಕೆ ಸಂಬಂಧಿಸಿದ ದಾಖಲೆಗಳನ್ನು ಒದಗಿಸುವಂತೆ ಸಿಬಿಐಗೆ ಪತ್ರ ಬರೆದಿದೆ. ಆದ್ರೆ, ಸಿಬಿಐ ಈವರೆಗೂ ಲೋಕಾಯುಕ್ತಕ್ಕೆ ಸಂಬಂಧಿಸಿದ ದಾಖಲೆ ಒದಗಿಸಿಲ್ಲ.

2017ರ ಆಗಸ್ಟ್ನಲ್ಲಿ ಆದಾಯ ತೆರಿಗೆ ಅಧಿಕಾರಿಗಳು ಡಿಕೆ ಶಿವಕುಮಾರ್ ಅವರ ಕನಕಪುರ ಮನೆ, ಬೆಂಗಳೂರಿನ ನಿವಾಸ, ಕಚೇರಿ ಹಾಗೂ ಆಪ್ತರ ಮನೆಗಳು ಸೇರಿದಂತೆ 39 ಕಡೆ ದಾಳಿ ನಡೆಸಿದ್ದರು. ಕಾಂಗ್ರೆಸ್ ಎಂಎಲ್ಸಿ ಗೋವಿಂದರಾಜು ಅವರ ಡೈರಿಯಲ್ಲಿ ಹೆಸರು ಪತ್ತೆಯಾದ ನಂತರ ಶಿವಕುಮಾರ್ ಅವರನ್ನು ವಿಚಾರಣೆ ನಡೆಸಿದ್ದರು.

ಡಿಕೆಶಿ ವಿರುದ್ಧದ ಸಿಬಿಐ ತನಿಖೆಯ ಆದೇಶವನ್ನು ಸರ್ಕಾರ ವಾಪಸ್ ಪಡೆದುಕೊಂಡಿರುವುದನ್ನು ಪ್ರಶ್ನಿಸಿ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಕೋರ್ಟ್ ಮೊರೆ ಹೋಗಿದ್ದು, ಹೈಕೋರ್ಟ್ ಫೆಬ್ರವರಿ 29ಕ್ಕೆ ವಿಚಾರಣೆ ಮುಂದೂಡಿದೆ.

Related News

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...