HomeKarnatakaಅರ್ಜಿ ತಿರಸ್ಕರಿಸಿದ್ದಕ್ಕೆ ನ್ಯಾಯಮೂರ್ತಿ ವಿರುದ್ಧ ತಿರುಗಿಬಿದ್ದು ಕಡತ ಎಸೆದ ವಕೀಲ: ಕ್ರಿಮಿನಲ್ ಕೇಸ್ ದಾಖಲಿಸಲು ಹೈಕೋರ್ಟ್...

ಅರ್ಜಿ ತಿರಸ್ಕರಿಸಿದ್ದಕ್ಕೆ ನ್ಯಾಯಮೂರ್ತಿ ವಿರುದ್ಧ ತಿರುಗಿಬಿದ್ದು ಕಡತ ಎಸೆದ ವಕೀಲ: ಕ್ರಿಮಿನಲ್ ಕೇಸ್ ದಾಖಲಿಸಲು ಹೈಕೋರ್ಟ್ ಆದೇಶ

ಬೆಂಗಳೂರು: ಕಕ್ಷಿದಾರರ ಅರ್ಜಿ ತಿರಸ್ಕರಿಸಿದ್ದಕ್ಕೆ ವಕೀಲರೊಬ್ಬರು ಸಿಟ್ಟಿಗೆದ್ದು ನ್ಯಾಯಮೂರ್ತಿ ವಿರುದ್ಧವೇ ತಿರುಗಿ ಬಿದ್ದು ಕಡತಗಳನ್ನು ಎಸೆದ ಘಟನೆ ನಡೆದಿದ್ದು, ವಕೀಲರ ವಿರುದ್ಧ ಕ್ರಿಮಿನಲ್ ನ್ಯಾಯಾಂಗ ನಿಂದನೆ ಪ್ರಕರಣ ದಾಖಲಿಸಲು ಹೈಕೋರ್ಟ್ ಆದೇಶ ನೀಡಿದೆ.

ಭಾರತ ಎಲೆಕ್ಟ್ರಾನಿಕ್ಸ್ ಲಿಮಿಟೆಡ್(ಬಿಇಎಲ್) ಪರವಾಗಿ ಸಲ್ಲಿಸಿದ್ದ ಕೇವಿಯೆಟ್ ಆಕ್ಷೇಪಿಸಿ ಅರ್ಜಿದಾರ ಅನ್ಣಾದೊರೈ ಎಂಬುವರು ಸಲ್ಲಿಸಿದ ಅರ್ಜಿಯನ್ನು ನ್ಯಾಯಾಲಯ ತಿರಸ್ಕರಿಸಿತ್ತು. ಯಾವುದೇ ಅರ್ಜಿ ದಾಖಲಿಸಿದರೂ ತಮ್ಮ ಗಮನಕ್ಕೆ ತರಬೇಕು ಎಂದು ಭಾರತ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ಪರವಾಗಿ ಅದರ ವ್ಯವಸ್ಥಾಪಕ ನಿರ್ದೇಶಕರು ಕೇವಿಯೆಟ್ ಸಲ್ಲಿಸಿದ್ದರು.

ವ್ಯವಸ್ಥಾಪಕ ನಿರ್ದೇಶಕರು ಅಥವಾ ಕೇವಿಯೆಟರ್ ಗೆ ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ಪರವಾಗಿ ಕೇವಿಯೆಟ್ ಅರ್ಜಿ ಸಲ್ಲಿಸುವ ಅಧಿಕಾರ ಇದೆಯೇ ಎಂದು ಅರ್ಜಿದಾರರು ಪ್ರಶ್ನಿಸಿದ್ದು, ನ್ಯಾಯಾಲಯ ಈ ಅರ್ಜಿ ವಜಾಗೊಳಿಸಿ 10 ಸಾವಿರ ರೂ.ಗಳನ್ನು ಕಾನೂನು ಸೇವಾ ಪ್ರಾಧಿಕಾರಕ್ಕೆ ನಾಲ್ಕು ವಾರದಲ್ಲಿ ಪಾವತಿಸಲು ಸೂಚನೆ ನೀಡಿತ್ತು. ಅರ್ಜಿ ಅರ್ಹತೆ ಕುರಿತು ವಾದಿಸುವಂತೆ ಅರ್ಜಿದಾರರಿಗೆ ನ್ಯಾಯಾಲಯ ತಿಳಿಸಿತ್ತು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಇದರಿಂದ ಕೋಪಗೊಂಡ ವಕೀಲರು ಕಡತವನ್ನು ನ್ಯಾಯಾಧೀಶರ ಕಡೆಗೆ ಎಸೆದಿದ್ದಾರೆ. ಆಗ ನ್ಯಾಯಮೂರ್ತಿ ಕೆ.ಎಸ್. ಹೇಮಲತಾ ಅವರಿದ್ದ ಏಕ ಸದಸ್ಯ ಪೀಠ, ವಕೀಲರು ಆಕ್ಷೇಪವಾಗಿ ಮಾತನಾಡಿದ್ದು, ಪರಿಣಾಮದ ಬಗ್ಗೆ ತಲೆಕೆಡಿಸಿಕೊಳ್ಳುವುದಿಲ್ಲ. ವಕೀಲರ ನಡೆ ನ್ಯಾಯಾಂಗ ಪ್ರಕ್ರಿಯೆಗೆ ಅಡ್ಡಿ ಉಂಟು ಮಾಡಿದೆ. ಅವರ ಕೃತ್ಯ ನ್ಯಾಯಾಲಯದ ಸಾಮಾನ್ಯ ಪ್ರಕ್ರಿಯೆ, ಕಾರ್ಯ ವಿಧಾನದಲ್ಲಿ ಹಸ್ತಕ್ಷೇಪ ಮಾಡಿದ್ದು, ನ್ಯಾಯಾಲಯದ ಘನತೆಗೆ ಹಾನಿ ಉಂಟು ಮಾಡಿದೆ. ಅವರ ವಿರುದ್ಧ ಕ್ರಿಮಿನಲ್ ನ್ಯಾಯಾಂಗ ನಿಂದನೆ ಪ್ರಕರಣ ದಾಖಲಿಸಬೇಕು ಎಂದು ಆದೇಶ ನೀಡಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular