HomeKarnatakaಸತತ 8 ಅವಧಿಗೆ ಒಂದೇ ಕ್ಷೇತ್ರದಿಂದ ಆಯ್ಕೆಯಾಗಿ ದಾಖಲೆ ನಿರ್ಮಿಸಿದ ಹೊರಟ್ಟಿಗೆ ವಿಧಾನಪರಿಷತ್ ನಲ್ಲಿ ಅಭಿನಂದನೆ

ಸತತ 8 ಅವಧಿಗೆ ಒಂದೇ ಕ್ಷೇತ್ರದಿಂದ ಆಯ್ಕೆಯಾಗಿ ದಾಖಲೆ ನಿರ್ಮಿಸಿದ ಹೊರಟ್ಟಿಗೆ ವಿಧಾನಪರಿಷತ್ ನಲ್ಲಿ ಅಭಿನಂದನೆ

ಬೆಂಗಳೂರು: ಸತತ ಎಂಟು ಅವಧಿಗೆ ಒಂದೇ ಕ್ಷೇತ್ರದಿಂದ ಆಯ್ಕೆಯಾಗಿ ಲಿಮ್ಕಾ ಬುಕ್ ಆಫ್ ರೆಕಾರ್ಡ್ಸ್ ಗೆ ಸೇರ್ಪಡೆಯಾಗಿರುವ ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರಿಗೆ ವಿಧಾನ ಪರಿಷತ್ ನಲ್ಲಿ ಸಚಿವರು, ಸದಸ್ಯರು ಅಭಿನಂದಿಸಿದ್ದಾರೆ.

ವಿಧಾನ ಪರಿಷತ್ ನಲ್ಲಿ ಸದಸ್ಯ ಬಿ.ಕೆ. ಹರಿಪ್ರಸಾದ್, ಎಂಟು ಅವಧಿಗೆ ಆಯ್ಕೆಯಾಗಿ ದಾಖಲೆ ನಿರ್ಮಿಸಿರುವ ಸಭಾಪತಿ ಹೊರಟ್ಟಿ ಅವರ ಬಗ್ಗೆ ವಿಷಯ ಪ್ರಸ್ತಾಪಿಸಿದ್ದು, ಹೊರಟ್ಟಿ ಸೇರಿದಂತೆ ಕೇವಲ ಮೂವರು ರಾಜಕಾರಣಿಗಳ ಹೆಸರು ಮಾತ್ರ ಈ ಸಾಲಿನ ಲಿಮ್ಕಾ ಬುಕ್ ಆಫ್ ರೆಕಾರ್ಡ್ಸ್ ನಲ್ಲಿ ಸೇರ್ಪಡೆಯಾಗಿದೆ. ಇದು ಅಪರೂಪದ ಮತ್ತು ಅಸಾಧಾರಣವಾದ ಸಾಧನೆಯಾಗಿದ್ದು, ಪಕ್ಷಾತೀತವಾಗಿ ಎಲ್ಲರ ಪ್ರೀತಿ ಗಳಿಸಿದ ಕಾರಣ ಹೊರಟ್ಟಿಯವರಿಗೆ ವಿಶೇಷ ಸ್ಥಾನ ದೊರೆತಿದೆ ಎಂದು ಹೇಳಿದ್ದಾರೆ.

ಅರಣ್ಯ ಸಚಿವ ಈಶ್ವರ್ ಖಂಡ್ರೆ ಅವರು, ಕಪ್ಪು ಚುಕ್ಕೆ ಇಲ್ಲದೆ ರಾಜ್ಯದ ಜನರ ಸೇವೆ ಮಾಡಿದ ಹೊರಟಿಯವರ ಬಗ್ಗೆ ಎಷ್ಟು ಹೇಳಿದರೂ ಕಡಿಮೆ ಎಂದು ಅಭಿನಂದಿಸಿದ್ದಾರೆ. ಕೃಷಿ ಸಚಿವ ಚಲುವರಾಯಸ್ವಾಮಿ, ಸ್ನೇಹಕ್ಕೆ ಮತ್ತೊಂದು ಹೆಸರು ಬಸವರಾಜ ಹೊರಟ್ಟಿ. ತಾರತಮ್ಯ ಮಾಡದೆ ನಿಷ್ಪಕ್ಷಪಾತವಾಗಿ ನಡೆದುಕೊಂಡಿದ್ದಾರೆ ಎಂದು ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಎಲ್ಲಾ ಪಕ್ಷಗಳ ಸದಸ್ಯರು ನನ್ನ ಸೇವೆ ಗುರುತಿಸಿ ಒಳ್ಳೆಯ ಮಾತನಾಡಿರುವುದು ಜೀವನದ ಅತ್ಯಂತ ಸಂತೋಷದ ದಿನ ಎಂದು ಹೇಳಿದ ಬಸವರಾಜ ಹೊರಟ್ಟಿ ಕೃತಜ್ಞತೆ ಸಲ್ಲಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular