ಬೆಂಗಳೂರು: ರಾಜ್ಯದಲ್ಲಿ 256 ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳನ್ನು ಭರ್ತಿ ಮಾಡಿಕೊಳ್ಳಲು ಕರ್ನಾಟಕ ಲೋಕಸೇವಾ ಆಯೋಗಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ.
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಸಚಿವ ಪ್ರಿಯಾಂಕ್ ಖರ್ಗೆ ಅವರು ಈ ಬಗ್ಗೆ ಮಾಹಿತಿ ನೀಡಿದ್ದಾರೆ. ಸದನದಲ್ಲಿ ಕಾಂಗ್ರೆಸ್ ಶಾಸಕ ಡಾ. ಹೆಚ್.ಡಿ. ರಂಗನಾಥ್ ಅವರ ಗಮನ ಸೆಳೆಯುವ ಸೂಚನೆಗೆ ಸಚಿವರು ಉತ್ತರ ನೀಡಿ, ಗ್ರಾಮ ಲೆಕ್ಕಾಧಿಕಾರಿಗಳು, ಶಿಕ್ಷಕರು ಹಾಗೂ ಪಿಡಿಒಗಳನ್ನು ಶಾಸಕರು ಆಪ್ತ ಸಹಾಯಕರನ್ನಾಗಿ ನೇಮಿಸಿಕೊಳ್ಳುವುದನ್ನು ನಿಲ್ಲಿಸಿದಲ್ಲಿ ಜನರಿಗೆ ಉತ್ತಮ ಸೇವೆ ನೀಡಲು ಸಾಧ್ಯವಾಗುತ್ತದೆ ಎಂದು ತಿಳಿಸಿದ್ದಾರೆ.
ರಾಜ್ಯದಲ್ಲಿ ಸದ್ಯಕ್ಕೆ 256 ಪಿಡಿಒಗಳ ನೇಮಕಾತಿ ಮಾಡಿಕೊಳ್ಳಲಾಗುವುದು. ನೇಮಕಾತಿಗೆ ಸಂಬಂಧಿಸಿದಂತೆ ಕೆ.ಪಿ.ಎಸ್.ಸಿ.ಗೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಹೇಳಿದ್ದಾರೆ.