ಬೆಂಗಳೂರು: ಆಸ್ತಿ ತೆರಿಗೆ ಬಾಕಿ ಹಿನ್ನೆಲೆಯಲ್ಲಿ ಈವರೆಗೆ ಮಂತ್ರಿ ಮಾಲ್ ಗೆ ಸಂಕಷ್ಟ ಎದುರಾಗಿದ್ದನ್ನು ನೋಡಿದ್ದೇವೆ. ಇದೀಗ ಖ್ಯಾತ ನಿರ್ಮಾಪಕ ರಾಕ್ ಲೈನ್ ವೆಂಕಟೇಶ್ ಗೆ ಬಿಬಿಎಂಪಿ ಬಿಗ್ ಶಾಕ್ ನೀಡಿದೆ.
ರಾಕ್ ಲೈನ್ ವೆಂಕಟೇಶ್ ಒಡೆತನದ ಮಾಲ್ ಗೆ ಬಿಬಿಎಂಪಿ ಅಧಿಕಾರಿಗಳು ಬೀಗ ಜಡಿದಿರುವ ಘಟನೆ ಬೆಂಗಳೂರಿನ ಟಿ.ದಾಸರಹಳ್ಳಿಯಲ್ಲಿ ನಡೆದಿದೆ. ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡಿರುವ ಹಿನ್ನೆಲೆಯಲ್ಲಿ ಟಿ.ದಾಸರಹಳ್ಳಿಯ ಪ್ರಶಾಂತ ನಗರದಲ್ಲಿನ ರಾಕ್ ಲೈನ್ ಮಾಲ್ ಗೆ ಬಿಬಿಎಂಪಿ ಅಧಿಕಾರಿಕಾರಿಗಳು ಬೀಗ ಹಾಕಿದ್ದಾರೆ.
ರಾಕ್ ಲೈನ್ ಮಾಲ್ 11.51 ಕೋಟಿ ರೂಪಾಯಿ ತೆರಿಗೆ ಬಾಕಿ ಉಳಿಸಿಕೊಂಡಿದ್ದು, ಈ ಬಗ್ಗೆ ಹಲವು ಬಾರಿ ನೋಟಿಸ್ ನೀಡಿದರೂ ಯಾವುದೇ ಪ್ರತಿಕ್ರಿಯೆ ಬಾರದ ಹಿನ್ನೆಲೆಯಲ್ಲಿ ದಾಸರಹಳ್ಳಿಯ ಬಿಬಿಎಂಪಿ ಕಂದಾಯ ವಿಭಾಗದ ಅಧಿಕಾರಿಗಳು ರಾಕ್ ಲೈನ್ ಮಾಲ್ ಗೆ ಬೀಗ ಹಾಕಿದ್ದಾರೆ ಎಂದು ತಿಳಿದುಬಂದಿದೆ.