HomeKarnatakaBREAKING NEWS: ಮಾಜಿ ಕಾರ್ಪೊರೇಟರ್ ಪದ್ಮರಾಜ್ ಪೊಲೀಸ್ ವಶಕ್ಕೆ

BREAKING NEWS: ಮಾಜಿ ಕಾರ್ಪೊರೇಟರ್ ಪದ್ಮರಾಜ್ ಪೊಲೀಸ್ ವಶಕ್ಕೆ

ಬೆಂಗಳೂರು: ಬಿಜೆಪಿ ಶಾಸಕ, ಮಾಜಿ ಸಚಿವ ಕೆ.ಗೋಪಾಲಯ್ಯಗೆ ಜೀವ ಬೆದರಿಕೆ ಹಾಕಿದ ಪ್ರಕರಣ ಸಂಬಂಧಿಸಿದಂತೆ ಮಾಜಿ ಕಾರ್ಪೊರೇಟರ್ ಪದ್ಮರಾಜ್ ನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಶಾಸಕ ಕೆ.ಗೋಪಾಲಯ್ಯಗೆ ತಡರಾತ್ರಿ ಕರೆ ಮಾಡಿದ್ದ ಮಾಜಿ ಕಾರ್ಪೊರೇಟರ್ ಪದ್ಮರಾಜ್, ಜೀವಬೆದರಿಕೆ ಹಾಕಿದ್ದಲ್ಲದೇ ಅವಾಚ್ಯ ಶಬ್ಧಗಳಿಂದ ನಿಂದಿಸಿದ್ದಾಗಿ ಗೋಪಾಲಯ್ಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಕಾಮಾಕ್ಷಿಪಾಳ್ಯ ಠಾಣೆಯಲ್ಲಿ ಪದ್ಮರಾಜು ವಿರುದ್ಧ ಎಫ್ ಐ ಆರ್ ದಾಖಲಾಗಿತ್ತು.

ಇದೀಗ ಕಾಮಾಕ್ಷಿಪಾಳ್ಯ ಠಾಣೆ ಪೊಲೀಸರು ಪದ್ಮರಾಜ್ ನನ್ನು ವಶಕ್ಕೆ ಪಡೆದಿದ್ದಾರೆ. ಅಲ್ಲದೇ ಪದ್ಮರಾಜು ಮೊಬೈಲ್ ವಶಕ್ಕೆ ಪಡೆದು ಪರಿಶೀಲನೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular