HomeKarnatakaJOB ALERT : ಫೆ.26, 27 ರಂದು ಬೆಂಗಳೂರಲ್ಲಿ ರಾಜ್ಯ ಮಟ್ಟದ ಉದ್ಯೋಗ ಮೇಳ ;...

JOB ALERT : ಫೆ.26, 27 ರಂದು ಬೆಂಗಳೂರಲ್ಲಿ ರಾಜ್ಯ ಮಟ್ಟದ ಉದ್ಯೋಗ ಮೇಳ ; ನೋಂದಣಿಗೆ ಅರ್ಜಿ ಆಹ್ವಾನ

ಬೆಂಗಳೂರು : ಕರ್ನಾಟಕ ಸರ್ಕಾರದ ಕೌಶಲ್ಯಾಭಿವೃದ್ದಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ ಅಡಿಯಲ್ಲಿ ಕರ್ನಾಟ ಕೌಸಲ್ಯ ಅಭಿವೃದ್ದಿ ನಿಗಮದ ವತಿಯಿಂದ ಫೆ.26 ಮತ್ತು 27 ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ರಾಜ್ಯ ಮಟ್ಟದ ಬೃಹತ್ ಉದ್ಯೋಗ ಮೇಳವನ್ನು ಆಯೋಜಿಸಲಾಗಿದ್ದು ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ತಮ್ಮ ಹೆಸರನ್ನು ಆನ್ಲೈನ್ನಲ್ಲಿ ನೋಂದಾಯಿಸಿಕೊಳ್ಳಬಹುದು.

50 ಸಾವಿರಕ್ಕೂ ಹೆಚ್ಚು ಉದ್ಯೋಗಾವಕಾಶಗಳು ವಿವಿಧ ಕ್ಷೇತ್ರಗಳಲ್ಲಿ ಲಭ್ಯವಿದ್ದು, ಎಸ್ಎಸ್ಎಲ್ಸಿ, ಪಿಯುಸಿ, ಐಟಿಐ, ಡಿಪ್ಲೊಮಾ, ನರ್ಸಿಂಗ್, ಯಾವುದೇ ತಾಂತ್ರಿಕ, ತಾಂತ್ರಿಕೇತರ, ಪದವಿ, ಸ್ನಾತಕೋತ್ತರ ಪದವಿಯಲ್ಲಿ ಪಾಸ್/ಫೇಲ್ ಆದ ಎಲ್ಲಾ ವಿದ್ಯಾರ್ಹತೆಯ ಉದ್ಯೋಗಾಕಾಂಕ್ಷಿಗಳಿಗೆ ಅವಕಾಶವಿದ್ದು, ಈ ಉದ್ಯೋಗ ಮೇಳದಲ್ಲಿ ಭಾಗವಹಿಸಬಹುದು. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್ಲೈನ್ https://skillconnect.kaushalkar.com ಲಿಂಕ್ನಲ್ಲಿ ನೋಂದಾಯಿಸಿಕೊಂಡು ಉದ್ಯೋಗ ಮೇಳದಲ್ಲಿ ಭಾಗವಹಿಸಬಹುದು.

ಹೆಚ್ಚಿನ ಮಾಹಿತಿಗಾಗಿ ದೂ.ಸಂ: 08182-255294, ಮೊ.ಸಂ: 8310285799 ಅಥವಾ ಸಹಾಯವಾಣಿ ಸಂಖ್ಯೆ 18005999918(ವಿಸ್ತರಣಾ ಸಂಖ್ಯೆ-4) ನ್ನು ಸಂಪರ್ಕಿಸಬಹುದೆಂದು ಶಿವಮೊಗ್ಗದ ಜಿಲ್ಲಾ ಕೌಶಲ್ಯಾಭಿವೃದ್ದಿ ಅಧಿಕಾರಿ ಸುರೇಶ್ ಹೆಚ್ ಎಂ ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular