ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ನೇತೃತ್ವದ ಶಿವಸೇನೆ ಮುಂಬರುವ ರಾಜ್ಯಸಭಾ ಚುನಾವಣೆಗೆ ಮಿಲಿಂದ್ ದಿಯೋರಾ ಅವರನ್ನು ತನ್ನ ಅಭ್ಯರ್ಥಿಯಾಗಿ ಘೋಷಿಸಿದೆ ಎಂದು ತಿಳಿದು ಬಂದಿದೆ.
ಇತ್ತೀಚೆಗೆ ಕಾಂಗ್ರೆಸ್ ತೊರೆದು ದಶಕಗಳಷ್ಟು ಹಳೆಯ ಪಕ್ಷದೊಂದಿಗಿನ ಕುಟುಂಬ ಸಂಬಂಧವನ್ನು ಕಡಿದುಕೊಂಡ ದಿಯೋರಾ ನಾಳೆ ನಾಮಪತ್ರ ಸಲ್ಲಿಸಲಿದ್ದಾರೆ.
ರಾಜ್ಯಸಭೆ ಚುನಾವಣೆಗೆ ಈಗಾಗಲೇ ಬಿಜೆಪಿ ಹಾಗೂ ಕಾಂಗ್ರೆಸ್ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಇದೀಗ ಶಿವಸೇನೆ ಮುಂಬರುವ ರಾಜ್ಯಸಭಾ ಚುನಾವಣೆಗೆ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದೆ.