ಅಮೆರಿಕದಲ್ಲಿ ಭಾರತೀಯ ವಿದ್ಯಾರ್ಥಿಗಳ ಸಾವಿನ ಸರಣಿ ಮಧ್ಯೆ, ಕ್ಯಾಲಿಫೋರ್ನಿಯಾದಲ್ಲಿ ಇಬ್ಬರು ಮಕ್ಕಳು ಸೇರಿದಂತೆ ಕುಟುಂಬದ ನಾಲ್ವರು ಸದಸ್ಯರು ಶವವಾಗಿ ಪತ್ತೆಯಾಗಿರುವ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ.
ಮನೆಯ ಬಾಗಿಲುಗಳನ್ನು ಒಳಗಿನಿಂದ ಲಾಕ್ ಮಾಡಲಾಗಿದ್ದು, ದಂಪತಿ ಮತ್ತು ಅವರ ಇಬ್ಬರು ಮಕ್ಕಳು ಸೇರಿದಂತೆ ನಾಲ್ಕು ಶವಗಳನ್ನು ಪತ್ತೆಯಾಗಿದೆ. ಮೃತರನ್ನು ಕೇರಳ ಮೂಲದ ಆನಂದ್ ಸುಜಿತ್ ಹೆನ್ರಿ (42), ಅವರ ಪತ್ನಿ ಆಲಿಸ್ ಪ್ರಿಯಾಂಕಾ (40) ಮತ್ತು ಅವರ ಅವಳಿ ಮಕ್ಕಳಾದ ನೋವಾ ಮತ್ತು ನೈಥಾನ್ (4) ಎಂದು ಗುರುತಿಸಲಾಗಿದೆ.
ಬಲಿಯಾದವರಲ್ಲಿ ಇಬ್ಬರು ಗುಂಡೇಟಿನ ಗಾಯಗಳಿಂದ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ, ಇತರ ಇಬ್ಬರ ಸಾವಿಗೆ ಕಾರಣವನ್ನು ಇನ್ನೂ ನಿರ್ಧರಿಸಲಾಗಿಲ್ಲ. ಪೊಲೀಸರ ಪ್ರಕಾರ, ತನಿಖೆ ಇನ್ನೂ ನಡೆಯುತ್ತಿದೆ ಆದರೆ ಇದು ಕೊಲೆ-ಆತ್ಮಹತ್ಯೆ ಪ್ರಕರಣವಾಗಿರಬಹುದು ಎಂದು ಅವರು ಹೇಳಿದರು.