ಮಂಗಳೂರು: ಜರೋಸಾ ಶಾಲೆಯಲ್ಲಿ ಹಿಂದೂ ಧರ್ಮದ ಬಗ್ಗೆ ಅವಹೇಳನ ಪ್ರಕರಣ ಸಂಬಂಧ ಇದೀಗ ಇಬ್ಬರು ಶಾಸಕರ ವಿರುದ್ಧ ಎಫ್ ಐ ಆರ್ ದಾಖಲಾಗಿದೆ.
ಮಂಗಳೂರು ದಕ್ಷಿಣ ಕ್ಷೇತ್ರದ ಬಿಜೆಪಿ ಶಾಸಕ ವೇದವ್ಯಾಸ ಕಾಮತ್ ಹಾಗೂ ಮಂಗಳೂರು ಉತ್ತರ ಕ್ಷೇತ್ರದ ಬಿಜೆಪಿ ಶಾಸಕ ಭರತ್ ಶೆಟ್ಟಿ ವಿರುದ್ಧ ಪಾಂಡವೇಶ್ವರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಎಫ್ ಐ ಆರ್ ದಾಖಲಾಗಿದೆ.
ಇನ್ನು ಅನಿಲ್ ಜೆರಾಲ್ಡ್ ಲೋಬೋ ಎಂಬುವವರ ದೂರಿನ ಮೇರೆಗೆ ವಿಹೆಚ್ ಪಿ ಮುಖಂಡ ಶರಣ್ ಪಂಪ ವೆಲ್, ಪಾಲಿಕೆ ಸದಸ್ಯ ಸಂದೀಪ್ ಗರೋಡಿ, ಭರತ್ ಕುಮಾರ್ ಸೇರಿದಂತೆ ಹಲವರ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.
ಜರೋಸಾ ಶಾಲೆಯಲ್ಲಿ ಶಿಕ್ಷಕಿಯೊಬ್ಬರು ಹಿಂದೂ ಧರ್ಮದ ಬಗ್ಗೆ ಅವಹೇಳನಕಾರಿ ಮಾತನಾಡಿದ್ದಾರೆ ಎಂದು ಆರೋಪಿ ಪೋಷಕರು ಹಾಗೂ ಹಿಂದೂ ಸಂಘಟನೆ ಮುಖಂಡರು, ರಾಜಕೀಯ ನಾಯಕರು ಶಾಲೆ ಮುಂದೆ ಪ್ರತಿಭಟನೆ ನಡೆಸಿದ್ದರು. ಪ್ರತಿಭಟನೆ ಬಳಿಕ ಶಿಕ್ಷಕಿಯನ್ನು ಅಮಾನತು ಮಾಡಲಾಗಿತ್ತು. ಈ ಪ್ರಕರಣ ರಾಜಕೀಯ ತಿರುವು ಪಡೆದಿದ್ದು, ಶಾಲಾ ಆಡಳಿತ ಮಂಡಳಿಯ ನಿಯಮ ಉಲ್ಲಂಘಿಸುವಂತೆ ವಿದ್ಯಾರ್ಥಿಗಳನ್ನು ಪ್ರಚೋದಿಸಿದ ಕಾರಣ , ಹಿಂದೂ, ಕ್ರೈಸ್ತರ ನಡುವೆ ಗಲಭೆ ಸೃಷ್ಟಿಸಲು ಪ್ರಚೋದನೆ, ದಕ್ಷಿಣ ಕನ್ನಡ ಜಿಲ್ಲೆಯ ಶಾಂತಿ, ನೆಮ್ಮದಿಗೆ ಭಂಗ ತಂದ ಕಾರಣ ಹಾಗೂ ಶಾಲೆಯ ಎದುರು ಅಕ್ರಮವಾಗಿ ಗುಂಪುಗೂಡಿ ಗಲಾಟೆ ಹಿನ್ನೆಯಲ್ಲಿ ಎಫ್ ಐ ಆರ್ ದಾಖಲಿಸಲಾಗಿದೆ.