HomeKarnatakaBIG NEWS: ಪಾರ್ಕಿಂಗ್ ವಿಚಾರವಾಗಿ ಜಗಳ: ಡಾಕ್ಟರ್ ಗೆ ಕಪಾಳಮೋಕ್ಷ ಮಾಡಿದ ಕಾಂಗ್ರೆಸ್ ಮುಖಂಡ

BIG NEWS: ಪಾರ್ಕಿಂಗ್ ವಿಚಾರವಾಗಿ ಜಗಳ: ಡಾಕ್ಟರ್ ಗೆ ಕಪಾಳಮೋಕ್ಷ ಮಾಡಿದ ಕಾಂಗ್ರೆಸ್ ಮುಖಂಡ

ಬೆಳಗಾವಿ: ಅಪಾರ್ಟ್ ಮೆಂಟ್ ನಲ್ಲಿ ಕಾರು ಪಾರ್ಕಿಂಗ್ ವಿಚಾರವಾಗಿ ವೈದ್ಯ ಹಾಗೂ ಕಾಂಗೆಸ್ ಮುಖಂಡನ ನಡುವೆ ಮಾತಿಗೆ ಮಾತು ಬೆಳೆದ ಕಾಂಗ್ರೆಸ್ ಮುಖಂಡ ವೈದ್ಯನಿಗೆ ಕಪಾಳಮೋಕ್ಷ ಮಾಡಿರುವ ಘಟನೆ ಬೆಳಗಾವಿ ನಗರದಲ್ಲಿ ನಡೆದಿದೆ.

ವೈದ್ಯ ಪ್ರದೀಪ್ ಎಂಬುವವರಿಗೆ ಕಾಂಗ್ರೆಸ್ ಮುಖಂಡ ಆರೀಫ್ ದೇಸಾಯಿ ಏಕಾಏಕಿ ಕಪಾಳಕ್ಕೆ ಹೊಡೆದಿದ್ದಾರೆ. ಕಾಂಗ್ರೆಸ್ ಮುಖಂಡನ ಗೂಂಡಾಗಿರಿ ವರ್ತನೆ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ವೈದ್ಯ ಪ್ರದೀಪ್ ಹಾಗೂ ಪತ್ನಿ ನಿನ್ನೆ ರಾತ್ರಿ ಹೊರಗೆಹೋಗಿ ಊಟ ಮುಗಿಸಿ ಮನೆಗೆ ವಾಪಾಸ್ ಆಗಿದ್ದಾರೆ. ಅಪಾರ್ಟ್ ಮೆಂಟ್ ನಲ್ಲಿ ಕಾರು ಪಾರ್ಕಿಂಗ್ ವಿಚಾರವಾಗಿ ಕಾಂಗ್ರೆಸ್ ಮುಖಂಡ ಕ್ಯಾತೆ ತೆಗೆದಿದ್ದಾರೆ ಎನ್ನಲಾಗಿದೆ. ವೈದ್ಯ ಹಾಗೂ ಕಾಂಗ್ರೆಸ್ ಮುಖಂಡನ ನಡುವೆ ಜಗಳ ಆರಂಭವಾಗಿದೆ. ಕೋಪದ ಬರದಲ್ಲಿ ಕಾಂಗ್ರೆಸ್ ಮುಖಂಡ ವೈದ್ಯನಿಗ್ವ್ ಎರಡು ಬಾರಿ ಕಪಾಳಮೋಕ್ಷ ಮಾಡಿದ್ದಾನೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕಾಂಗ್ರೆಸ್ ಮುಖಂಡ ಡಾಕ್ಟರ್ ಗೆ ಕಪಾಳಕ್ಕೆ ಹೊಡೆದರೂ ದೂರು ದಾಖಲಾಗಿಲ್ಲ ಹಾಗಾಗಿ ಪೊಲೀಸರು ಕ್ರಮಕ್ಕೆ ಮುಂದಾಗಿಲ್ಲ ಎನ್ನಲಾಗಿದೆ.

For Latest News Updates, Join Our Whatsapp Community🚩
RELATED ARTICLES

Most Popular