ಬೆಂಗಳೂರು : ರಾಜ್ಯದಲ್ಲಿ ಇ-ಸ್ವತ್ತು ಸಮಸ್ಯೆ ಪರಿಹಾರಕ್ಕೆ ರಾಜ್ಯ ಸರ್ಕಾರವು ಮಹತ್ವದ ಕ್ರಮ ಕೈಗೊಳ್ಳಲಾಗಿದೆ ಎಂದು ಕಂದಾಯ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.
ಈ ಕುರಿತು ಮಾಹಿತಿ ನೀಡಿರುವ ಸಚಿವರು, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು ಮತ್ತು ಕೊಡಗು ಜಿಲ್ಲೆಗಳಲ್ಲಿ ಇ-ಸ್ವತ್ತು ಸಮಸ್ಯೆ ಇರುವುದು ಸರಕಾರದ ಗಮನಕ್ಕಿದ್ದು, ಆ ಸಮಸ್ಯೆಯನ್ನು ನಿವಾರಿಸುವ ನಿಟ್ಟಿನಲ್ಲಿ ಕಂದಾಯ ಇಲಾಖೆಯ ಸಚಿವರ ಜೊತೆಗೂಡಿ ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯತ್ ಸಿಇಒಗಳೊಂದಿಗೆ ಚರ್ಚಿಸಿ ಸಮಸ್ಯೆ ಬಗೆಹರಿಸಲಾಗುವುದು ಮತ್ತು ಜನರಿಗೆ ಅನುಕೂಲವಾಗುವ ರೀತಿಯಲ್ಲಿ ಕ್ರಮಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.