ನವದೆಹಲಿ: ಭಾರತ ಮತ್ತು ಇಂಗ್ಲೆಂಡ್ ನಡುವಿನ ಮೂರನೇ ಟೆಸ್ಟ್ ಪಂದ್ಯದ ಮುನ್ನಾದಿನದಂದು ಸೌರಾಷ್ಟ್ರ ಕ್ರಿಕೆಟ್ ಕ್ರೀಡಾಂಗಣವನ್ನು ನಿರಂಜನ್ ಶಾ ಕ್ರೀಡಾಂಗಣ ಎಂದು ಮರುನಾಮಕರಣ ಮಾಡಲಾಗಿದೆ.
ಬಿಸಿಸಿಐ ಕಾರ್ಯದರ್ಶಿ ಜಯ್ ಶಾ, ಮಾಜಿ ಕ್ರಿಕೆಟಿಗ ಸುನಿಲ್ ಗವಾಸ್ಕರ್ ಸೇರಿದಂತೆ ಹಲವು ಗಣ್ಯರು ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.
ಮಾಜಿ ಪ್ರಥಮ ದರ್ಜೆ ಕ್ರಿಕೆಟಿಗ, ಉದ್ಯಮಿ ಮತ್ತು ಕ್ರಿಕೆಟ್ ಆಡಳಿತಗಾರ ನಿರಂಜನ್ ಶಾ ಅವರನ್ನು ಜಯ್ ಶಾ ವೇದಿಕೆಗೆ ಸ್ವಾಗತಿಸಿದರು. ಸೌರಾಷ್ಟ್ರ ಕ್ರಿಕೆಟಿಗ ಚೇತೇಶ್ವರ ಪೂಜಾರ ಸೇರಿದಂತೆ ಭಾರತೀಯ ಕ್ರಿಕೆಟ್ ತಂಡದ ಸದಸ್ಯರು ಸಮಾರಂಭದಲ್ಲಿ ಉಪಸ್ಥಿತರಿದ್ದರು. ಪ್ರಕಟಣೆಯ ನಂತರ ಹೊಸ ಕ್ರೀಡಾಂಗಣದ ಹೆಸರನ್ನು ಭವ್ಯ ಶೈಲಿಯಲ್ಲಿ ಅನಾವರಣಗೊಳಿಸುತ್ತಿದ್ದಂತೆ ಪಟಾಕಿ ಪ್ರದರ್ಶನ ಎಲ್ಲರ ಗಮನ ಸೆಳೆಯಿತು.
ನಿರಂಜನ್ ಶಾ ಯಾರು?
ಅನುಭವಿ ಆಡಳಿತಗಾರರಾಗಿರುವ ಶಾ ನಾಲ್ಕು ದಶಕಗಳಿಗೂ ಹೆಚ್ಚು ಕಾಲ ವಿವಿಧ ಕ್ರಿಕೆಟ್ ಆಡಳಿತ ಹುದ್ದೆಗಳನ್ನು ಅಲಂಕರಿಸಿದ್ದಾರೆ. ಅವರು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯ (ಬಿಸಿಸಿಐ) ಮಾಜಿ ಗೌರವ ಕಾರ್ಯದರ್ಶಿ (ನಾಲ್ಕು ಬಾರಿ ಚುನಾಯಿತರು) ಮತ್ತು ಪಶ್ಚಿಮ ವಲಯದಿಂದ ಬಿಸಿಸಿಐ ಉಪಾಧ್ಯಕ್ಷರಾಗಿದ್ದಾರೆ. ಶಾ ಅವರು ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಉಪಾಧ್ಯಕ್ಷರಾಗಿಯೂ ಕಾರ್ಯನಿರ್ವಹಿಸಿದ್ದಾರೆ.