ಬೆಂಗಳೂರು : ರಾಜ್ಯ ಸರ್ಕಾರದಿಂದ ಮಾನ್ಯತೆ ಪಡೆದ ಎಲ್ಲಾ ಖಾಸಗಿ ಆಸ್ಪತ್ರೆಗಳಲ್ಲಿ ನಿಗಮದ ನೌಕರರು ಮತ್ತು ಅವರ ಅವಲಂಬಿತರು ಪಡೆದ ವೈದ್ಯಕೀಯ ಚಿಕಿತ್ಸಾ ವೆಚ್ಚವನ್ನು CGHS ದರಪಟ್ಟಿಯಲ್ಲಿ ಮರುಪಾವತಿ ಮಾಡಲಾಗುತ್ತಿದೆ.
ಮುಂದುವರೆದು,. ಜಂಟಿ ನಿರ್ದೇಶಕರು (ವೈದ್ಯಕೀಯ) ಆರೋಗ್ಯ ಸೌಧ, ಬೆಂಗಳೂರು ರವರಿಂದ ಸರ್ಕಾರದಿಂದ ಮಾನ್ಯತೆ ಪಡೆದ ಖಾಸಗಿ ಆಸ್ಪತ್ರೆಗಳ ಇತ್ತೀಚಿನ ಪಟ್ಟಿಯನ್ನು ಪಡೆದಿದ್ದು, ಸದರಿ ಪಟ್ಟಿಯನ್ನು ಈ ಪತ್ರದೊಂದಿಗೆ ಲಗತ್ತಿಸಿದ್ದು, ಸದರಿ ಪಟ್ಟಿಯಲ್ಲಿರುವ ತಿದ್ದುಪಡಿ/ಮಾರ್ಪಾಡುಗಳನ್ನು ಅಳವಡಿಸಿಕೊಂಡು ವೈದ್ಯಕೀಯ ಮರುಪಾವತಿಗೆ ಕ್ರಮವಹಿಸುವಂತೆ ಕೋರಲಾಗಿದೆ. ಪ್ರತಿಯನ್ನು ಮುಖ್ಯ ಲೆಕ್ಕಾಧಿಕಾರಿ ಹಾಗೂ ಆರ್ಥಿಕ ಸಲಹೆಗಾರರು, ಕರಾರಸಾ ನಿಗಮ ರವರ ಮಾಹಿತಿ ಹಾಗೂ ಅಗತ್ಯ ಕ್ರಮಕ್ಕಾಗಿ ಕಳುಹಿಸಿದೆ ಎಂದು ಕಾರ್ಮಿಕ ಇಲಾಖೆ ಸುತ್ತೋಲೆ ಹೊರಡಿಸಿದೆ.