ಬೆಂಗಳೂರು : ಬಂಧಿಸುವ ನಮ್ಮ ರಾಜ್ಯದ ರೈತರನ್ನು ಕೂಡಲೇ ಬಿಡುಗಡೆ ಮಾಡಿ ಎಂದು ಮಧ್ಯಪ್ರದೇಶ ಸಿಎಂ ಗೆ ಕರ್ನಾಟಕದ ಸಿಎಂ ಸಿದ್ದರಾಮಯ್ಯ ಪತ್ರ ಬರೆದಿದ್ದಾರೆ.
ದೆಹಲಿಯಲ್ಲಿ ಪ್ರತಿಭಟನೆಗೆ ತೆರಳುತ್ತಿದ್ದ ಹುಬ್ಬಳ್ಳಿ ರೈತರನ್ನು ಮಧ್ಯಪ್ರದೇಶ ಸರ್ಕಾರ ಬಂಧಿಸಿರುವುದು ಅತ್ಯಂತ ಖಂಡನೀಯ.ಬಂಧನಕ್ಕೊಳಗಾದ ನಮ್ಮ ರಾಜ್ಯದ ಎಲ್ಲಾ ರೈತರನ್ನು ಮಧ್ಯಪ್ರದೇಶ ಸರ್ಕಾರ ತಕ್ಷಣ ಬಿಡುಗಡೆ ಮಾಡಬೇಕು ಎಂದು ಸಿಎಂ ಸಿದ್ದರಾಮಯ್ಯ ಆಗ್ರಹಿಸಿದ್ದರು. ಈ ಬೆನ್ನಲ್ಲೇ ಬಂಧಿಸುವ ನಮ್ಮ ರಾಜ್ಯದ ರೈತರನ್ನು ಕೂಡಲೇ ಬಿಡುಗಡೆ ಮಾಡಿ ಎಂದು ಮಧ್ಯಪ್ರದೇಶ ಸಿಎಂ ಗೆ ಕರ್ನಾಟಕದ ಸಿಎಂ ಸಿದ್ದರಾಮಯ್ಯ ಪತ್ರ ಬರೆದಿದ್ದಾರೆ.
ಮಧ್ಯಪ್ರದೇಶದಲ್ಲಿ ಬಂಧಿಸಿರುವ ಕರ್ನಾಟಕದ ರೈತರನ್ನು ಕೂಡಲೇ ಬಿಡುಗಡೆ ಮಾಡುವಂತೆ ಒತ್ತಾಯಿಸಿ ಮಧ್ಯಪ್ರದೇಶ ಮುಖ್ಯಮಂತ್ರಿ ಮೋಹನ್ ಜಾಧವ್ ಗೆ ಸಿಎಂ ಪತ್ರ ಬರೆದಿದ್ದಾರೆ.
ಬೆಂಗಳೂರಿನಿಂದ ದೆಹಲಿಗೆ ತೆರಳುತ್ತಿದ್ದ ರಾಜ್ಯದ ರೈತರನ್ನು ಮಧ್ಯಪ್ರದೇಶದ ಬೋಪಾಲ್ನಲ್ಲಿ ಬಂಧಿಸಲಾಗಿದ್ದು, ಕಾರಣವಿಲ್ಲದೆ ಬಂಧಿಸಿರುವ ರೈತರನ್ನು 4 ದಿನ ಆದರೂ ಇನ್ನೂ ಬಿಡುಗಡೆ ಮಾಡಿಲ್ಲ. ಅಲ್ಲದೇ ಇವರುಗಳನ್ನು ಪೊಲೀಸರು ವಾರಣಾಸಿಗೆ ಸ್ಥಳಾಂತರಿಸಿರುವ ಮಾಹಿತಿ ಇದೆ. ದೆಹಲಿಯಲ್ಲಿ ಶಾಂತಿಯುತ ಪ್ರತಿಭಟನೆ ನಡೆಸಲು ತೆರಳುತ್ತಿದ್ದ ರೈತರನ್ನು ಮಧ್ಯಪ್ರದೇಶ ಪೊಲೀಸರು ಬಂಧಿಸಿರುವುದು ಸರಿಯಲ್ಲ., ರಾಜ್ಯದ ರೈತರನ್ನು ಕೂಡಲೇ ಬಿಡುಗಡೆ ಮಾಡಿ ಎಂದು ಮಧ್ಯಪ್ರದೇಶ ಸಿಎಂ ಗೆ ಕರ್ನಾಟಕದ ಸಿಎಂ ಸಿದ್ದರಾಮಯ್ಯ ಪತ್ರ ಬರೆದಿದ್ದಾರೆ.