ಬೆಂಗಳೂರು : ಕ್ರೀಡಾಪಟುಗಳಿಗೆ ಸಚಿವ ಬಿ.ನಾಗೇಂದ್ರ ಸಿಹಿಸುದ್ದಿ ನೀಡಿದ್ದು, ಯಲಹಂಕ ತಾಲೂಕಿನಲ್ಲಿ ಕ್ರೀಡಾಸಿಟಿ ನಿರ್ಮಾಣ ಮಾಡಲಾಗುವುದು ಎಂದು ತಿಳಿಸಿದ್ದಾರೆ.
ಈ ಕುರಿತು ಮಾಹಿತಿ ನೀಡಿರುವ ಸಚಿವರು, ಯಲಹಂಕ ತಾಲೂಕು ಹೆಸರಘಟ್ಟ ಹೋಬಳಿಯ ಮಾವಳ್ಳಿಪುರ ಬಳಿ 100 ಎಕರೆ ಪ್ರದೇಶದಲ್ಲಿ ಕ್ರೀಡಾಸಿಟಿ (ಸ್ಪೋರ್ಟ್ಸ್ ಸಿಟಿ) ಯನ್ನು ನಿರ್ಮಿಸಲಾಗುವುದು ಎಂದು ಪರಿಶಿಷ್ಟ ಪಂಗಡಗಳ ಕಲ್ಯಾಣ ಹಾಗೂ ಯುವಸಬಲೀಕರಣ ಮತ್ತು ಕ್ರೀಡಾ ಸಚಿವರಾದ ಬಿ.ನಾಗೇಂದ್ರ ತಿಳಿಸಿದ್ದಾರೆ.