2023-24ನೇ ಸಾಲಿನಲ್ಲಿ ಕುರುಗೋಡು ಪುರಸಭೆಗೆ ಒಟ್ಟು 66 ವೈಯಕ್ತಿಕ ಶೌಚಾಲಯ ಗುರಿ ನಿಗಧಿಪಡಿಸಿದ್ದು, ಈಗಾಗಲೇ ಪ್ರಕಟಣೆ ಹೊರಡಿಸಲಾಗಿದ್ದು, ಇಲ್ಲಿಯವರೆಗೆ ಒಟ್ಟು 27 ಅರ್ಜಿಗಳು ಸ್ವೀಕೃತಗೊಂಡಿವೆ. ಇನ್ನುಳಿದ 39 ವೈಯಕ್ತಿಕ ಶೌಚಾಲಯ ನಿರ್ಮಿಸಿಕೊಳ್ಳಲು ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.
ಕುರುಗೋಡು ಪುರಸಭೆ ವ್ಯಾಪ್ತಿಯಲ್ಲಿ ವೈಯಕ್ತಿಕ ಶೌಚಾಲಯಗಳನ್ನು ಹೊಂದದೇ ಇರುವ ಮತ್ತು ಈ ಹಿಂದೆ ವೈಯಕ್ತಿಕ ಶೌಚಾಲಯಕ್ಕೆ ಪುರಸಭೆಯಿಂದ ಯಾವುದೇ ಅನುದಾನ ಪಡೆಯದೇ ಇರುವ ಫಲಾನುಭವಿಗಳು ತಮ್ಮ ಸ್ವಂತ ಜಾಗದಲ್ಲಿ ಶೌಚಾಲಯ ನಿರ್ಮಿಸಿಕೊಳ್ಳಲು ಸಹಾಯಧನ ಪಡೆಯಬಹುದಾಗಿದೆ.
ಅರ್ಜಿಗಳನ್ನು ಫೆ.17ರೊಳಗಾಗಿ ಕಚೇರಿ ಸಮಯದಲ್ಲಿ ಪುರಸಭೆ ಕಾರ್ಯಾಲಯಕ್ಕೆ ಸಲ್ಲಿಸಬೇಕು. ಅವಧಿ ಮೀರಿ ಬಂದಂತಹ ಅರ್ಜಿಗಳನ್ನು ಪರಿಗಣಿಸುವುದಿಲ್ಲ.ಹೆಚ್ಚಿನ ಮಾಹಿತಿಗಾಗಿ ಕುರುಗೋಡು ಪುರಸಭೆ ಕಾರ್ಯಾಲಯ ಕಚೇರಿ ಅಥವಾ ದೂ.08393-263166ಗೆ ಸಂಪರ್ಕಿಸಬಹುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.