HomeKarnatakaJOB ALERT : ಉದ್ಯೋಗಾಂಕ್ಷಿಗಳ ಗಮನಕ್ಕೆ : ಅಂಚೆ ಇಲಾಖೆಯ ಹುದ್ದೆಗಳಿಗೆ ಫೆ.22 ರಂದು ನೇರ...

JOB ALERT : ಉದ್ಯೋಗಾಂಕ್ಷಿಗಳ ಗಮನಕ್ಕೆ : ಅಂಚೆ ಇಲಾಖೆಯ ಹುದ್ದೆಗಳಿಗೆ ಫೆ.22 ರಂದು ನೇರ ಸಂದರ್ಶನ

ಬಳ್ಳಾರಿ : ಅಂಚೆ ಜೀವ ವಿಮೆ ಹಾಗೂ ಗ್ರಾಮೀಣ ಅಂಚೆ ಜೀವ ವಿಮೆ ಉತ್ಪನ್ನಗಳನ್ನು ಮಾರಾಟ ಮಾಡಲು ನೇರ ಪ್ರತಿನಿಧಿ ಮತ್ತು ಫೀಲ್ಡ್ ಆಫೀಸರ್ ಹುದ್ದೆಗಳ ನಿಯುಕ್ತಿಗೆ ಅರ್ಹ ಅಭ್ಯರ್ಥಿಗಳಿಂದ ನೇರ ಸಂದರ್ಶನ ಏರ್ಪಡಿಸಲಾಗಿದೆ ಎಂದು ಬಳ್ಳಾರಿ ವಿಭಾಗದ ಅಂಚೆ ಅಧೀಕ್ಷಕ ವಿ.ಎಲ್.ಚಿತ್ಕೋರಟೆ ಅವರು ತಿಳಿಸಿದ್ದಾರೆ.

ನೇರ ಸಂದರ್ಶನವನ್ನು ಫೆ.22 ರಂದು ಬೆಳಿಗ್ಗೆ 10 ಗಂಟೆಗೆ ನಗರದ ಕೋಟೆ ಆವರಣದ ಅಂಚೆ ಅಧೀಕ್ಷಕರ ಕಾರ್ಯಾಲಯದಲ್ಲಿ ಹಮ್ಮಿಕೊಳ್ಳಲಾಗಿದೆ. ಆಸಕ್ತ ಅಭ್ಯರ್ಥಿಗಳು ತಮ್ಮ ಇತ್ತೀಚಿನ ಭಾವಚಿತ್ರ ಹಾಗೂ ಶೈಕ್ಷಣಿಕ ಪ್ರಮಾಣ ಪತ್ರದ ನಕಲುಗಳೊಂದಿಗೆ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು ಎಂದು ಅವರು ತಿಳಿಸಿದ್ದಾರೆ.

ಅರ್ಹತೆಗಳು

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಅರ್ಜಿದಾರರು ಕನಿಷ್ಠ 18 ವಯಸ್ಸಿನವರಾಗಿರಬೇಕು, ಗರಿಷ್ಠ ವಯೋಮಿತಿ ಇರುವುದಿಲ್ಲ. ವಿಮಾ ಉತ್ಪನ್ನ ಮಾರಾಟ ಮಾಡುವ ಅನುಭವದೊಂದಿಗೆ ಕಂಪ್ಯೂಟರ್ ಜ್ಞಾನ ಹೊಂದಿರಬೇಕು. ಅಭ್ಯರ್ಥಿಯು 5000 ಕ್ಕಿಂತ ಕಡಿಮೆ ಜನಸಂಖ್ಯೆ ಹೊಂದಿರುವ ಪ್ರದೇಶದಲ್ಲಿ ವಾಸಮಾಡುತ್ತಿದ್ದರೆ ಹತ್ತನೇ ತರಗತಿ ಉತ್ತೀರ್ಣರಾಗಿರಬೇಕು. 5000 ಕ್ಕಿಂತ ಹೆಚ್ಚಿನ ಜನಸಂಖ್ಯೆ ಹೊಂದಿರುವ ಪ್ರದೇಶದಲ್ಲಿ ವಾಸಿಸುತ್ತಿದ್ದರೆ 12ನೇ ತರಗತಿ ಉತ್ತೀರ್ಣರಾಗಿರಬೇಕು. ಇತರೆ ವಿಮಾ ಕಂಪನಿ, ಸಂಸ್ಥೆ, ಸಂಘಗಳ ಏಜೆಂಟ್ ಆಗಿರಬಾರದು.

ನೇರ ಪ್ರತಿನಿಧಿ ಹುದ್ದೆ:

ನೇರ ಪ್ರತಿನಿಧಿ ಹುದ್ದೆಗೆ ನಿರುದ್ಯೋಗಿ, ಸ್ವಯಂ ಉದ್ಯೋಗ ನಿರತ ಯುವಕರು, ಮಾಜಿ ವಿಮಾ ಕಂಪನಿಗಳ ಸಲಹೆಗಾರರು, ಅಂಗನವಾಡಿ ಕಾರ್ಯಕರ್ತೆರು, ಮಹಿಳಾ ಮಂಡಳಿಯ ಕಾರ್ಯಕರ್ತೆಯರು, ಮಾಜಿ ಗ್ರಾಮ ಪಂಚಾಯತ್ ಸದಸ್ಯರು ಅರ್ಹರಾಗಿರುತ್ತಾರೆ.

ಫೀಲ್ಡ್ ಆಫೀಸರ್ ಹುದ್ದೆ:

ಫೀಲ್ಡ್ ಆಫೀಸರ್ ಹುದ್ದೆಗೆ ನಿವೃತ್ತ ಕೇಂದ್ರ ಮತ್ತು ರಾಜ್ಯ ಸರ್ಕಾರದ ನೌಕರರು, ನಿವೃತ್ತ ಗ್ರಾಮೀಣ ಅಂಚೆ ಸೇವಕರು ಸರ್ಹರಾಗಿರುತ್ತಾರೆ.ಸಂದರ್ಶನ ಮೂಲಕ ಆಯ್ಕೆಯಾದ ಅಭ್ಯರ್ಥಿಯು ರಾಷ್ಟ್ರೀಯ ಉಳಿತಾಯ ಪತ್ರ ಅಥವಾ ಕಿಸಾನ್ ವಿಕಾಸ್ ಪತ್ರದ ರೂಪದಲ್ಲಿ 5000 ರೂ.ಗಳನ್ನು ಭದ್ರತಾ ಠೇವಣಿ ಇಡಬೇಕು. ಆಯ್ಕೆಯಾದ ನೇರ ಪ್ರತಿನಿಧಿ, ಫೀಲ್ಡ್ ಆಫೀಸರ್ಗಿಳಿಗೆ ತಮ್ಮ ವ್ಯವಹಾರ ತಕ್ಕಂತೆ ಸೂಕ್ತ ಕಮೀಷನ್ ಇದ್ದು, ನಿಗದಿತ ವೇತನವಿರುದಿಲ್ಲ.
ಹೆಚ್ಚಿನ ಮಾಹಿತಿಗಾಗಿ ಅಭಿವೃದ್ಧಿ ಅಧಿಕಾರಿ ಮಾರುತಿ.ವಿ.ಯು ಅವರ ಮೊ.9481694420 ಅಥವಾ ಹತ್ತಿರದ ಅಂಚೆ ಕಚೇರಿಗೆ ಭೇಟಿ ನೀಡಬಹುದು ಎಂದು ಬಳ್ಳಾರಿ ವಿಭಾಗದ ಅಂಚೆ ಅಧೀಕ್ಷಕ ವಿ.ಎಲ್.ಚಿತ್ಕೋ್ಟೆ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular