ಬೆಂಗಳೂರು : ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ದಿ ನಿಗಮದಿಂದ 2023-24ನೇ ಸಾಲಿನಲ್ಲಿ ಅನುಷ್ಠಾನಗೊಳಿಸುತ್ತಿರುವ ವಿವಿಧ ಯೋಜನೆಗಳಡಿ ಸಾಲ ಸೌಲಭ್ಯ ಪಡೆಯಲು ಮತೀಯ ಅಲ್ಪಸಂಖ್ಯಾತರಿಂದ (ಅಂದರೆ ಮುಸ್ಲಿಂ, ಕ್ರಿಶ್ಚಿಯನ್, ಜೈನರು, ಭೌದ್ದರು, ಸಿಖ್ಖರು, ಪಾರ್ಸಿಗಳು ಜನಾಂಗದವರಿಂದ) ಆನ್-ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ ಎಂದು ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ (ನಿ)ದ ವ್ಯವಸ್ಥಾಪಕರು ತಿಳಿಸಿದ್ದಾರೆ.
“ಸ್ವಯಂ ಉದ್ಯೋಗ” ಸಾಲ ಸಹಾಯಧನ ಯೋಜನೆಯಲ್ಲಿ ರಾಷ್ಟ್ರೀಕೃತ ಬ್ಯಾಂಕುಗಳ ಸಹಯೋಗದೊಂದಿಗೆ ಘಟಕ ವೆಚ್ಚದ ಶೇ.33 ಅಥವಾ ಗರಿಷ್ಟ ಮಿತಿ ರೂ.1 ಲಕ್ಷ ಸಹಾಯಧನ ನೀಡಲಾಗುವುದು.
*ಅರ್ಹತೆಗಳು:
ಅರ್ಜಿದಾರರು ಕನಿಷ್ಠ 15 ವರ್ಷದಿಂದ ಖಾಯಂ ನಿವಾಸಿಯಾಗಿರಬೇಕು. ಸ್ವಯಂ ಉದ್ಯೋಗ ಯೋಜನೆಗೆ ಅರ್ಜಿದಾರರ ಕುಟುಂಬದ ವಾರ್ಷಿಕ ಆದಾಯ ಗ್ರಾಮಾಂತರ ಪ್ರದೇಶದವರಿಗೆ ರೂ.81 ಸಾವಿರ ಮತ್ತು ನಗರ ಪ್ರದೇಶದವರಿಗೆ ರೂ.1.03 ಲಕ್ಷ ಮೀರಬಾರದು. ಅರ್ಜಿದಾರರು ವಯಸ್ಸು ಕನಿಷ್ಠ 18 ವರ್ಷ ಮತ್ತು ಗರಿಷ್ಠ 55 ವರ್ಷ ಹೊಂದಿರಬೇಕು. ಶೇ.33ರಷ್ಟು ಮಹಿಳೆಯರಿಗೆ ಮತ್ತು ಶೇ.3ರಷ್ಟು ಅಂಗವಿಕಲರಿಗೆ ಮೀಸಲಾತಿ ಇರುತ್ತದೆ.
ಅರ್ಜಿದಾರರು ತಮ್ಮ ಅರ್ಜಿಯೊಂದಿಗೆ ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ರೇಷನ್ ಕಾರ್ಡ್, ಆಧಾರ್ ಕಾರ್ಡ್, ಗುರುತಿನ ಚೀಟಿ, ಬ್ಯಾಂಕ್ ಖಾತೆ ಪುಸ್ತಕ ಪ್ರತಿ, ಯೋಜನಾ ವರದಿ ಹಾಗೂ ಅರ್ಜಿದಾರರ ಹಾಗೂ ಜಾಮೀನುದಾರರ 2 ಭಾವಚಿತ್ರಗಳು ನೀಡಬೇಕು.ಈ ಹಿಂದೆ ನಿಗಮದ ಸೌಲಭ್ಯವನ್ನು ಪಡೆದವರು ಮತ್ತೆ ಸೌಲಭ್ಯವನ್ನು ಪಡೆಯಲು ಅರ್ಹರಿರುವುದಿಲ್ಲ.
ಅರ್ಜಿ ಸಲ್ಲಿಸಲು ಆನ್-ಲೈನ್ನ https://kmdconline.karnataka.gov.in/ ಗೆ ಭೇಟಿ ನೀಡಬಹುದು.
ಅರ್ಜಿ ಸಲ್ಲಿಸಲು ಫೆ.29 ಕೊನೆಯ ದಿನವಾಗಿರುತ್ತದೆ. ಹೆಚ್ಚಿನ ಮಾಹಿತಿಗಾಗಿ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ (ನಿ) ಜಿಲ್ಲಾ ವ್ಯವಸ್ಥಾಪಕರ ಕಚೇರಿ ಸಂಪರ್ಕಿಸಬಹುದಾಗಿದೆ.