HomeKarnatakaBIG BREAKING: ವಸತಿ ಶಾಲೆಗಳಲ್ಲಿ ಧಾರ್ಮಿಕ ಹಬ್ಬಗಳ ಆಚರಣೆಗೆ ಹೇರಿದ್ದ ನಿರ್ಬಂಧ ವಾಪಸ್

BIG BREAKING: ವಸತಿ ಶಾಲೆಗಳಲ್ಲಿ ಧಾರ್ಮಿಕ ಹಬ್ಬಗಳ ಆಚರಣೆಗೆ ಹೇರಿದ್ದ ನಿರ್ಬಂಧ ವಾಪಸ್

ಬೆಂಗಳೂರು: ವಸತಿ ಶಾಲೆಗಳಲ್ಲಿ ಧಾರ್ಮಿಕ ಹಬ್ಬಗಳ ಆಚರಣೆಗೆ ಹೇರಿದ್ದ ನಿರ್ಬಂಧ ವಾಪಸ್ ಪಡೆಯಲಾಗಿದೆ. ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ ನಿರ್ಬಂಧ ವಾಪಸ್ ಪಡೆದುಕೊಂಡಿದೆ.

ವಸತಿ ಶಾಲೆಗಳಲ್ಲಿ ಧಾರ್ಮಿಕ ಹಬ್ಬಗಳ ಆಚರಣೆಗೆ ನಿರ್ಬಂಧ ಹೇರಲಾಗಿತ್ತು. ಈ ಆಕ್ಷೇಪ ವ್ಯಕ್ತವಾದ ನಂತರ ಧಾರ್ಮಿಕ ಹಬ್ಬಗಳ ಆಚರಣೆಗೆ ಸಂಬಂಧಿಸಿದ ನಿರ್ಬಂಧವನ್ನು ವಾಪಸ್ ಪಡೆಯಲಾಗಿದೆ.

ವಸತಿ ಶಾಲೆ ಮತ್ತು ಕಾಲೇಜುಗಳಲ್ಲಿ ಧಾರ್ಮಿಕ ಹಬ್ಬ ಆಚರಿಸದಂತೆ, 10 ಅನುಮೋದಿತ ರಾಷ್ಟ್ರೀಯ ಹಬ್ಬಗಳನ್ನು ಮಾತ್ರ ಆಚರಿಸುವಂತೆ ಸುತ್ತೋಲೆ ಹೊರಡಿಸಲಾಗಿತ್ತು. ನಿಗದಿತ ರಾಷ್ಟ್ರೀಯ ಹಬ್ಬ, ನಾಡ ಹಬ್ಬ, ಜಯಂತಿಗಳನ್ನು ಹೊರತುಪಡಿಸಿ, ಧಾರ್ಮಿಕ ಹಬ್ಬ ಆಚರಿಸಿದರೆ ಪ್ರಾಂಶುಪಾಲರು, ಸಿಬ್ಬಂದಿ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಲಾಗಿತ್ತು. ಕರ್ನಾಟಕ ಸರ್ಕಾರದ ಅಂಗ ಸಂಸ್ಥೆಯಾಗಿರುವ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ ಆದೇಶ ವಾಪಸ್ ಪಡೆದುಕೊಂಡಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular