![](https://kannadadunia.com/wp-content/uploads/2024/02/school-2.jpg)
ಬೆಂಗಳೂರು : ರಾಜ್ಯದಲ್ಲಿರುವ ಶಾಲೆಗಳಲ್ಲಿ ದ್ವಿ-ಭಾಷಾ ಮಧ್ಯಮ ವಿಭಾಗಗಳನ್ನು ಕಾಲಮಿತಿಯಲ್ಲಿ ಆರಂಭಿಸಲು ರಾಜ್ಯ ಸರ್ಕಾರ ಉದ್ಧೇಶಿಸಿದೆ ಎಂದು ಶಿಕ್ಷಣ ಸಚಿವ ಮಧುಬಂಗಾರಪ್ಪ ಹೇಳಿದ್ದಾರೆ.
ಪ್ರಸ್ತುತ ಇಂಗ್ಲಿಷ್ ಮಾಧ್ಯಮಕ್ಕೆ ಹೆಚ್ಚಿನ ಬೇಡಿಕೆ ಇದೆ. ಪೋಷಕರು ತಮ್ಮ ಮಕ್ಕಳನ್ನು ಆಂಗ್ಲ ಮಾಧ್ಯಮದಲ್ಲಿ ವ್ಯಾಸಂಗ ಮಾಡಿಸಬೇಕೆಂಬ ಆಸಕ್ತಿ ಇಟ್ಟುಕೊಂಡಿದ್ದಾರೆ. ಇದು ಕೂಡ ನಮ್ಮ ಸರಕಾರಿ ಶಾಲೆಗಳಲ್ಲಿ ಮಕ್ಕಳ ಸಂಖ್ಯೆ ಕಡಿಮೆಯಾಗಲು ಕಾರಣ ಎಂಬುದು ಗೊತ್ತಾಗಿದೆ ಎಂದರು.
ರಾಜ್ಯದ ಶಾಲೆಗಳಲ್ಲಿ ಶೀಘ್ರವೇ ದ್ವಿ-ಭಾಷಾ ಮಾಧ್ಯಮ ವಿಭಾಗಗಳನ್ನು ಹಂತಹಂತವಾಗಿ ಪ್ರಾರಂಭಿಸಲಾಗುವುದು ಎಂದು ತಿಳಿಸಿದರು.