HomeKarnatakaರಾಜ್ಯದ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕರೇ ಗಮನಿಸಿ : ʻಮುಖ್ಯ ಶಿಕ್ಷಕʼರ ಹುದ್ದೆಗೆ ʻಕೌನ್ಸಿಲಿಂಗ್ʼ ಪ್ರಕ್ರಿಯೆ...

ರಾಜ್ಯದ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕರೇ ಗಮನಿಸಿ : ʻಮುಖ್ಯ ಶಿಕ್ಷಕʼರ ಹುದ್ದೆಗೆ ʻಕೌನ್ಸಿಲಿಂಗ್ʼ ಪ್ರಕ್ರಿಯೆ ಮುಂದೂಡಿಕೆ

ಬೆಂಗಳೂರು : 2023-24ನೇ ಸಾಲಿನಲ್ಲಿ ರಾಜ್ಯದ ಸರ್ಕಾರಿ ಪ್ರಾಥಮಿಕ ಶಾಲಾ ಸಹಶಿಕ್ಷಕರಿಗೆ ಮುಖ್ಯ ಶಿಕ್ಷಕರ ಹುದ್ದೆಗೆ ಮತ್ತು ಮುಖ್ಯ ಶಿಕ್ಷಕರಿಗೆ ಹಿರಿಯ ಮುಖ್ಯ ಶಿಕ್ಷಕರ ಹುದ್ದೆಗೆ ಕೌನ್ಸಿಲಿಂಗ್‌ ಪ್ರಕ್ರಿಯೆಯನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದೆ.

2023-24ನೇ ಸಾಲಿನಲ್ಲಿ ರಾಜ್ಯದ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕರ ವೃಂದದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸಹಶಿಕ್ಷಕರುಗಳಿಗೆ ಮುಖ್ಯ ಶಿಕ್ಷಕರ(HM) ವೃಂದಕ್ಕೆ ಹಾಗೂ ಮುಖ್ಯ ಶಿಕ್ಷಕರ ವೃಂದದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವವರಿಗೆ ಹಿರಿಯ ಮುಖ್ಯ ಶಿಕ್ಷಕರ (SHM) ವೃಂದಕ್ಕೆ ಸ್ಥಾನಪನ್ನ ಬಡ್ತಿ ನೀಡಲು ಉದ್ದೇಶಿಸಿ ಉಲ್ಲೇಖಿತ-1ರಲ್ಲಿ ಅಧಿಸೂಚನೆಯನ್ನು ಹೊರಡಿಸಲಾಗಿತ್ತು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಆದರೆ ಪದವೀಧರ ಪ್ರಾಥಮಿಕ ಶಾಲಾ(ಜಿ.ಪಿ.ಟಿ) ಶಿಕ್ಷಕರು ಬಡ್ತಿ ಸಂಬಂಧ ಕರ್ನಾಟಕ ಆಡಳಿತ ನ್ಯಾಯಮಂಡಳಿಯಲ್ಲಿ ದಾವೆ ಹೂಡಿದ್ದು ಅರ್ಜಿ ಸಂಖ್ಯೆ: 1134-1143/2022. ರ ನ್ಯಾಯಾಲಯದ ಅಂತಿಮ ತೀರ್ಪಿನಂತೆ ಹಾಗೂ ಉಲ್ಲೇಖಿತ-2ರ ಪುನರ್ ಪರಿಶೀಲನಾ ಅರ್ಜಿ ಸಂಖ್ಯೆ: 196-205/2023 ರ ಆದೇಶದಂತೆ ಮತ್ತು ಉಲ್ಲೇಖ-4 ರಲ್ಲಿ ಕರ್ನಾಟಕ ಆಡಳಿತ ನ್ಯಾಯ ಮಂಡಳಿಯ ನ್ಯಾಯಾಂಗ ನಿಂದನಾ ದಾವೆ ಸಂಖ್ಯೆ: ಸಿ.ಟಿ.ಎ. 46-55/2024 ದಾಖಲಾಗಿರುವ ಹಿನ್ನೆಲೆಯಲ್ಲಿ ಆಡಳಿತಾತ್ಮಕ ಹಿತದೃಷ್ಟಿಯಿಂದ ಉಲ್ಲೇಖ-1ರ ವೇಳಾಪಟ್ಟಿಯ ಪ್ರಕಾರ ಮುಖ್ಯ ಶಿಕ್ಷಕರ ಮತ್ತು ಹಿರಿಯ ಮುಖ್ಯ ಶಿಕ್ಷಕರ ವೃಂದಕ್ಕೆ ನೀಡಬೇಕಾಗಿದ್ದ ಬಡ್ತಿ ಕೌನ್ಸಿಲಿಂಗ್ ಪ್ರಕ್ರಿಯೆಯನ್ನು ತಾತ್ಕಾಲಿಕವಾಗಿ ಹಾಗೂ ಮುಂದಿನ ಆದೇಶವದವರೆಗೂ ಮುಂದೂಡಲಾಗಿದೆ. ಸಕ್ಷಮ ಪ್ರಾಧಿಕಾರಿಗಳು ಇದನ್ನು ಗಮನಿಸಲು ಸೂಚಿಸಿದೆ.

For Latest News Updates, Join Our Whatsapp Community🚩
RELATED ARTICLES

Most Popular