ಬೆಂಗಳೂರು: ಹಣಕಾಸು ಖಾತೆ ಹೊಂದಿರುವ ಸಿಎಂ ಸಿದ್ದರಾಮಯ್ಯ ಅವರು ಇಂದು ತಮ್ಮ 15 ನೇ ಬಜೆಟ್ನ್ನು ಮಂಡಿಸಲಿದ್ದಾರೆ. ಅಭಿವೃದ್ಧಿ ಯೋಜನೆಗಳ ಜೊತೆಗೆ ಕಾಂಗ್ರೆಸ್ ಘೋಷಿಸಿರುವ ಐದು ‘ಗ್ಯಾರಂಟಿ’ ಯೋಜನೆಗಳನ್ನು ಪೂರೈಸುವ ದೊಡ್ಡ ಜವಾಬ್ದಾರಿ ಸಿದ್ದರಾಮಯ್ಯ ಅವರ ಮೇಲಿದೆ.
ಲೋಕಸಭೆ ಚುನಾವಣೆಗೆ ಹೊತ್ತಲ್ಲೇ ಬಜೆಟ್ ಮಂಡನೆ ಮಾಡುತ್ತಿರುವುದರಿಂದ ಮಹತ್ವದ ಯೋಜನೆಗಳನ್ನು ಘೋಷಿಸುವ ನಿರೀಕ್ಷೆಗಳಿವೆ. ಲೋಕಸಭೆ ಚುನಾವಣೆ ಮೇಲೆ ಗಮನ ಇಟ್ಟುಕೊಂಡು ರಾಜ್ಯ ಬಜೆಟ್ನಲ್ಲಿ ಸಿದ್ದರಾಮಯ್ಯ ಮಹತ್ವದ ಘೋಷಣೆ ಮಾಡುವ ಸಾಧ್ಯೆತೆ ಇದೆ.
ಇಂದು ಬೆಳಗ್ಗೆ 10.15ಕ್ಕೆ ಸಿದ್ದರಾಮಯ್ಯ ಅವರು ವಿಧಾನಸಭೆಯಲ್ಲಿ ಬಜೆಟ್ ಮಂಡನೆ ಮಾಡಲಿದ್ದಾರೆ. ಬಜೆಟ್ ನೇರ ಪ್ರಸಾರ ಸರ್ಕಾರದ ಮಾಧ್ಯಮದಲ್ಲಿ ನೇರ ಪ್ರಸಾರವಾಗಲಿದೆ. ಬಜೆಟ್ ಮಂಡನೆ ಮುನ್ನ ಸಿದ್ದರಾಮಯ್ಯ ಅವರು ವಿಶೇಷ ಸಂಪುಟ ಸಭೆ ನಡೆಸಲಿದ್ದಾರೆ. ಇನ್ನು ಸಿದ್ದರಾಮಯ್ಯ ಅವರ 15ನೇ ಬಾರಿಯ ಬಜೆಟ್ ಮಂಡಣೆ ಇದಾಗಿರಲಿದ್ದು ಕರ್ನಾಟಕದ ಮಟ್ಟಿಗೆ ಇದೊಂದು ಹೊಸ ದಾಖಲೆಯಾಗಿದೆ.
ಈ ಬಾರಿ ರಾಜ್ಯದ ಬಜೆಟ್ ಗಾತ್ರ 3.80 ಲಕ್ಷ ಕೋಟಿ ರೂ. ಏರಿಕೆಯಾಗಲಿದೆ. ಈವರೆಗೂ ರಾಜ್ಯದ ಬಜೆಟ್ ಗಾತ್ರ 3.27 ಲಕ್ಷ ಕೋಟಿ ರೂ. ದಾಟಿರಲಿಲ್ಲ. ಆದರೆ ಈ ಬಾರಿ ಸುಮಾರು 50 ಸಾವಿರ ಕೋಟಿ ರೂ.ಹೆಚ್ಚಳವಾಗಲಿದೆ.