ಬೆಂಗಳೂರು: ರಾಜ್ಯದಲ್ಲಿ 2025ರ ಬೆಳಗ್ಗೆ 500 ಕರ್ನಾಟಕ ಪಬ್ಲಿಕ್ ಸ್ಕೂಲ್ ಆರಂಭಿಸಲು ನಿರ್ಧರಿಸಲಾಗಿದೆ ಎಂದು ಶಾಲಾ ಶಿಕ್ಷಣ ಸಚಿವ ಎಸ್. ಮಧು ಬಂಗಾರಪ್ಪ ತಿಳಿಸಿದ್ದಾರೆ.
ವಿಧಾನಸಭೆಯಲ್ಲಿ ಪ್ರಶ್ನೋತ್ತರ ವೇಳೆಯಲ್ಲಿ ಬಿಜೆಪಿ ಸದಸ್ಯ ಆರಗ ಜ್ಞಾನೇಂದ್ರ ಅವರ ಪ್ರಶ್ನೆಗೆ ಉತ್ತರ ನೀಡಿದ ಸಚಿವರು, ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಕನ್ನಡ ಇಂಗ್ಲಿಷ್ ಎರಡು ಭಾಷೆಗಳಲ್ಲಿಯೂ ಬೋಧನೆಯ ಸೌಲಭ್ಯ ಕಲ್ಪಿಸಲು ಸರ್ಕಾರ ಚಿಂತನೆ ನಡೆಸಿದೆ. ಮಾಧ್ಯಮದ ಆಯ್ಕೆ ಸ್ವಾತಂತ್ರ್ಯವನ್ನು ಪೋಷಕರಿಗೆ ಬಿಡಲಾಗುವುದು ಎಂದು ತಿಳಿಸಿದ್ದಾರೆ.
ಇಂಗ್ಲಿಷ್ ಗೆ ಬೇಡಿಕೆ ಹೆಚ್ಚಾಗಿದೆ. ಕನ್ನಡ ಮಾಧ್ಯಮವನ್ನು ಉಳಿಸಲು ಸರ್ಕಾರ ಬದ್ಧವಾಗಿದೆ. ಕಳೆದ ಎರಡು ವರ್ಷಗಳಿಂದ 59 ಇಂಗ್ಲಿಷ್ ಮಾಧ್ಯಮ ಶಾಲೆಗಳಿಗೆ ಒತ್ತು ನೀಡಿದ್ದು, ಸಿಎನ್ಆರ್ ನೆರವು ಬಳಸಿಕೊಂಡು ಮೂಲಸೌಕರ್ಯ ಹೆಚ್ಚಿಸಿ ಇಂಗ್ಲಿಷ್ ಮಾಧ್ಯಮ ಸರ್ಕಾರಿ ಶಾಲೆಗಳಲ್ಲಿ ಸುಧಾರಣೆ ತರುವುದಾಗಿ ತಿಳಿಸಿದ್ದಾರೆ.