ಬೆಂಗಳೂರು : ಬಜೆಟ್ ಮಂಡನೆ ವೇಳೆ ಕಾಂಗ್ರೆಸ್ ಶಾಲು ಹಾಕಲು ಕೈ ಶಾಸಕರಿಗೆ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ.
ಸಿಎಂ ಸಿದ್ದರಾಮಯ್ಯ ಬಜೆಟ್ ಓದುವ ವೇಳೆ ಕಾಂಗ್ರೆಸ್ ಶಾಲು ಹಾಕಿಕೊಳ್ಳಲು ಕಾಂಗ್ರೆಸ್ ಶಾಸಕರಿಗೆ ಸೂಚನೆ ನೀಡಿದ್ದಾರೆ ಎಂದು ತಿಳಿದು ಬಂದಿದೆ. ವಿಧಾನಸಭೆ ಸಭಾಂಗಣ ಪ್ರವೇಶಿಸುವ ಕಾಂಗ್ರೆಸ್ ಶಾಸಕರಿಗೆ ಮುಖ್ಯಸಚೇತಕ ಅಶೋಕ್ ಪಟ್ಟಣ ಕಾಂಗ್ರೆಸ್ ಶಾಲು ಹಾಕಿ ಕಳುಹಿಸುತ್ತಿದ್ದಾರೆ.ಈಗಾಗಲೇ ವಿಧಾನಸೌಧಕ್ಕೆ ಸಿಎಂ ಸಿದ್ದರಾಮಯ್ಯ ಆಗಮಿಸಿದ್ದು, ಕೆಲವೇ ಕ್ಷಣಗಳಲ್ಲಿ ಬಜೆಟ್ ಮಂಡಿಸಲಿದ್ದಾರೆ.