ಬೆಂಗಳೂರು: ವಿಧಾನಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ದಾಖಲೆಯ 15ನೇ ಬಜೆಟ್ ಮಂಡನೆ ಆರಂಭಿಸಿದ್ದಾರೆ. ಈ ನಡುವೆ ವಿಪಕ್ಷ ಬಿಜೆಪಿ ಸದಸ್ಯರು ಭಿತ್ತಿ ಪತ್ರಗಳನ್ನು ಹಿಡಿದು ಸದನದ ಒಳಗೆ ಪ್ರವೇಶಿಸಲು ಮುಂದಾಗಿದ್ದಾರೆ.
ಬಜೆಟ್ ಮಂಡನೆ ವೇಳೆ ಭಿತ್ತಿ ಪತ್ರ ಪ್ರದರ್ಶನಕ್ಕೆ ಬಿಜೆಪಿ ಸದಸ್ಯರು ಸಿದ್ಧತೆ ಮಾಡಿಕೊಂಡಿದ್ದರು. ಈ ನಿಟ್ಟಿನಲ್ಲಿ ಭಿತ್ತಿ ಪತ್ರ ಹಿಡಿದು ಬಂದಿದ್ದರು. ಆದರೆ ಮಾರ್ಷಲ್ ಗಳು ಇದಕ್ಕೆ ಅವಕಾಶ ನೀಡಿಲ್ಲ.
ಬಿಜೆಪಿ ಸದಸ್ಯರ ಬಳಿ ಇದ್ದ ಭಿತ್ತಿ ಪತ್ರಗಳನ್ನು ವಶಕ್ಕೆ ಪಡೆದಿದ್ದಾರೆ. ಬಳಿಕ ಸಿಎಂ ಸಿದ್ದರಾಮಯ್ಯ ವಿಧಾನಸಭೆಯಲ್ಲಿ ಪ್ರಸಕ್ತ ಸಾಲಿನ ಬಜೆಟ್ ಮಂಡನೆ ಆರಂಭಿಸಿದ್ದಾರೆ.

 
			 
		 
		 
		 
		 Loading ...
 Loading ... 
		 
		 
		