ಬೆಂಗಳೂರು : ಪ್ರವಾಸೋದ್ಯಮ ಕ್ಷೇತ್ರಕ್ಕೆ ರಾಜ್ಯ ಸರ್ಕಾರ ಬಂಪರ್ ಕೊಡುಗೆ ನೀಡಿದ್ದು, 10 ಪ್ರವಾಸಿ ತಾಣಗಳಲ್ಲಿ ಕೇಬಲ್ ಕಾರ್ ರೋಪ್ ನಿರ್ಮಾಣ ಮಾಡುವುದಾಗಿ ಸಿಎಂ ಸಿದ್ದರಾಮಯ್ಯ ಘೋಷಿಸಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು 2024-25ನೇ ಸಾಲಿನ ಕರ್ನಾಟಕ ಬಜೆಟ್ ಮಂಡನೆ ಮಾಡುತ್ತಿದ್ದಾರೆ. ಸಿದ್ದರಾಮಯ್ಯ ಅವರು ಮಂಡನೆ ಮಾಡುತ್ತಿರುವ 15ನೇ ಬಜೆಟ್ ಇದಾಗಿದೆ. ಲೋಕಸಭೆ ಚುನಾವಣೆ ಸಮೀಪಿಸುತ್ತಿರುವುದರಿಂದ ಬಜೆಟ್ ಮೇಲಿನ ನಿರೀಕ್ಷೆ, ಕುತೂಹಲಗಳೂ ಹೆಚ್ಚಾಗಿವೆ.