ಬೆಂಗಳೂರು : ಹಿರಿಯ ನಾಗರಿಕರಿಗೆ ರಾಜ್ಯ ಸರ್ಕಾರ ಗುಡ್ ನ್ಯೂಸ್ ನೀಡಿದ್ದು, ‘ಅನ್ನ ಸುವಿಧಾ’ ಯೋಜನೆ ಜಾರಿಗೆ ತರುವುದಾಗಿ ಸಿಎಂ ಸಿದ್ದರಾಮಯ್ಯ ಬಜೆಟ್ ನಲ್ಲಿ ಘೋಷಿಸಿದ್ದಾರೆ.
ಅನ್ನ ಸುವಿಧಾ’ ಎಂಬ ಹೊಸ ಯೋಜನೆಯಡಿಯಲ್ಲಿ ಹೋಮ್ ಡೆಲವರಿ ಆಪ್ ರಚಿಸಿ 80 ವರ್ಷ ದಾಟಿದ ಹಿರಿಯ ನಾಗರಿಕರು ಇರುವ ಮನೆಗೆ ಈ ಯೋಜನೆಯ ಸೇವೆ ನೀಡಲು ಸರ್ಕಾರ ನಿರ್ಧರಿಸಿದೆ.
ಹಾಗೂ ತೋಟಗಾರಿಕೆ ಬೆಳೆಗಳಿಗೆ ವಿಜಯಪುರ ಜಿಲ್ಲೆಯು ಹೆಸರುವಾಸಿಯಾಗಿದೆ. ಈ ಭಾಗದಲ್ಲಿ ತೋಟಗಾರಿಕೆ ಬೆಳೆಗಳಿಗೆ ಇನ್ನಷ್ಟು ಉತ್ತೇಜನ ನೀಡಲು ವಿಜಯಪುರ ಜಿಲ್ಲೆಯ ಆಲಮೇಲದಲ್ಲಿ ತೋಟಗಾರಿಕೆ ಕಾಲೇಜನ್ನು ಸ್ಥಾಪಿಸಲಾಗುವುದು ಎಂದು ಸಿಎಂ ಘೋಷಣೆ ಮಾಡಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು 2024-25ನೇ ಸಾಲಿನ ಕರ್ನಾಟಕ ಬಜೆಟ್ ಮಂಡನೆ ಮಾಡುತ್ತಿದ್ದಾರೆ. ಸಿದ್ದರಾಮಯ್ಯ ಅವರು ಮಂಡನೆ ಮಾಡುತ್ತಿರುವ 15ನೇ ಬಜೆಟ್ ಇದಾಗಿದೆ. ಲೋಕಸಭೆ ಚುನಾವಣೆ ಸಮೀಪಿಸುತ್ತಿರುವುದರಿಂದ ಬಜೆಟ್ ಮೇಲಿನ ನಿರೀಕ್ಷೆ, ಕುತೂಹಲಗಳೂ ಹೆಚ್ಚಾಗಿವೆ.