ಬೆಂಗಳೂರು : ಮೀನುಗಾರರ ರಕ್ಷಣೆಗೆ ಸಮುದ್ರ ಆಂಬುಲೆನ್ಸ್ ನೀಡಲಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ.
ಮೀನುಗಾರಿಕೆ ಕ್ಷೇತ್ರಕ್ಕೆ ಸಿಎಂ ಸಿದ್ದರಾಮಯ್ಯ ಬಂಪರ್ ಕೊಡುಗೆ ನೀಡಿದ್ದಿ, ಬಜೆಟ್ನಲ್ಲಿ 3 ಸಾವಿರ ಕೋಟಿ ಯೋಜನೆ ಘೋಷಿಸಿದ್ದಾರೆ. ಸಮುದ್ರದಲ್ಲಿ ಮೀನುಗಾರಿಕೆಗೆ ತೆರಳುವ ಮೀನುಗಾರರನ್ನು ತುರ್ತು ಸಂದರ್ಭಗಳಲ್ಲಿ ರಕ್ಷಣೆಗೆ ಮಾಡುವುದಕ್ಕಾಗಿ ಅತ್ಯಾಧುನಿಕ ಸಮುದ್ರ ಆಂಬುಲೆನ್ಸ್ ಖರೀದಿಸಲಾಗುವುದು ಎಂದು ಅವರು ಘೋಷಣೆ ಮಾಡಿದ್ದಾರೆ.
ಹೊನ್ನಾವರ ಅಥವಾ ಕಾಸರಗೋಡದಲ್ಲಿ ಮೀನುಗಾರಿಕೆ ಸಂಶೋಧನಾ ಕೇಂದ್ರ ಸ್ಥಾಪನೆ ಮಾಡಲಾಗುವುದು. ಭದ್ರಾವತಿಯಲ್ಲಿ ಹೈಟೆಕ್ ಮೀನು ಮಾರುಕಟ್ಟೆ ಸ್ಥಾಪನೆ ಮಾಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದರು.
ರಾಜ್ಯದ ಮೂರು ಜಿಲ್ಲೆಗಳಲ್ಲಿ ಆಹಾರ ಪಾರ್ಕ್ ನಿರ್ಮಾಣ ಮಾಡಲಾಗುವುದು. ಶಿವಮೊಗ್ಗದ ಸೋಗಾನೆ, ವಿಜಯಪುರದ ಇಟ್ಟಂಗಿಹಾಳ, ಬೆಂಗಳೂರು ಗ್ರಾ. ಜಿಲ್ಲೆ ಮೂಗೆನಹಳ್ಳಿ ಬಳಿ ಆಹಾರ ಪಾರ್ಕ್ ನಿರ್ಮಾಣ ಮಾಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಘೋಷಿಸಿದರು.