ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಅವರು ಇಂದು ಕರ್ನಾಟಕದ 2024-25ನೇ ಸಾಲಿನ ಬಜೆಟ್ (Karnataka Budget) ಮಂಡಿಸುತ್ತಿದ್ದಾರೆ. ಇದು ಅವರ ದಾಖಲೆಯ 15 ನೇ ಬಜೆಟ್ ಮಂಡನೆ ಆಗಿದೆ.
ಅಂಜನಾದ್ರಿ ಅಭಿವೃದ್ಧಿಗೆ 100 ಕೋಟಿ ರೂ. ಅನುದಾನ ನೀಡಲಾಗುವುದು. 233 ಕೋಟಿ ರೂ. ವೆಚ್ಚದಲ್ಲಿ ಸೈನ್ಸ್ ಸಿಟಿ ನಿರ್ಮಾಣ, ಕಲಬುರಗಿಯಲ್ಲಿ ಬಸವಣ್ಣ ಮತ್ತು ವಚನ ಮಂಟಪ ಸ್ಥಾಪನೆ ಮಾಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.
27 ಸಾವಿರ ಕೋಟಿ ರೂ.ವೆಚ್ಚದಲ್ಲಿ ಬೆಂಗಳೂರು ಬಿಸಿನೆಸ್ ಕಾರಿಡಾರ್ ಸ್ಥಾಪನೆ ಮಾಡಲಾಗುವುದು. ರಾಜ್ಯದ ಮೂರು ಜಿಲ್ಲೆಗಳಲ್ಲಿ ಆಹಾರ್ ಪಾರ್ಕ್ ನಿರ್ಮಾಣ ಮಾಡಲಾಗುವುದು. ಶಿವಮಗ್ಗ, ವಿಜಯಪುರ, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಆಹಾರ ಪಾರ್ಕ್ ನಿರ್ಮಾಣ ಮಾಡಲಾಗುವುದು ಎಂದು ಹೇಳಿದ್ದಾರೆ.
ಮರುಪಾವತಿ ಮಾಡುವ ಮಹಿಳೆಯರಿಗೆ ಸರ್ಕಾರದಿಂದಲೇ ಶೇ. 6 ರಷ್ಟು ಬಡ್ಡಿ ಸಹಾಯಧನ ನೀಡಲಾಗುವುದು . ಮೇಕೆದಾಟು ಯೋಜನೆಗೆ ಪ್ರತ್ಯೇಕ ಯೋಜನಾ ವಿಭಾಗ ಸ್ಥಾಪನೆ ಮಾಡಲಾಗುವುದು. ಬಹುನಿರೀಕ್ಷಿತ ಎತ್ತಿನಹೊಳೆ ಯೋಜನೆ ವಿಸ್ತರಣೆ ಮಾಡಲಾಗುವುದು ಎಂದು ತಿಳಿಸಿದಾರೆ.
ಅಂಗನವಾಡಿ ಕಾರ್ಯಕರ್ತೆಯರಿಗೆ ಸ್ಮಾರ್ಟ್ ಫೋನ್ 20 ಸಾವಿರ ಅಂಗನವಾಡಿ ಕಾರ್ಯಕರ್ತೆಯರಿಗೆ ತರಬೇತಿ ನೀಡಲಾಗುವುದು ಎಂದು ಹೇಳಿದ್ದಾರೆ.