alex Certify BREAKING : ರಾಜ್ಯ ಸರ್ಕಾರದಿಂದ ʻಕರ್ನಾಟಕ ರೈತ ಸಮೃದ್ಧಿ ಯೋಜನೆʼ ಜಾರಿ : ಸಿಎಂ ಸಿದ್ದರಾಮಯ್ಯ ಘೋಷಣೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ರಾಜ್ಯ ಸರ್ಕಾರದಿಂದ ʻಕರ್ನಾಟಕ ರೈತ ಸಮೃದ್ಧಿ ಯೋಜನೆʼ ಜಾರಿ : ಸಿಎಂ ಸಿದ್ದರಾಮಯ್ಯ ಘೋಷಣೆ

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಅವರು ಇಂದು ಕರ್ನಾಟಕದ 2024-25ನೇ ಸಾಲಿನ ಬಜೆಟ್ (Karnataka Budget) ಮಂಡಿಸುತ್ತಿದ್ದಾರೆ. ಇದು ಅವರ ದಾಖಲೆಯ 15 ನೇ ಬಜೆಟ್ ಮಂಡನೆ ಆಗಿದೆ.

ಅಂಜನಾದ್ರಿ ಅಭಿವೃದ್ಧಿಗೆ 100 ಕೋಟಿ ರೂ. ಅನುದಾನ  ನೀಡಲಾಗುವುದು. 233 ಕೋಟಿ ರೂ. ವೆಚ್ಚದಲ್ಲಿ ಸೈನ್ಸ್‌ ಸಿಟಿ ನಿರ್ಮಾಣ,  ಕಲಬುರಗಿಯಲ್ಲಿ ಬಸವಣ್ಣ ಮತ್ತು ವಚನ ಮಂಟಪ ಸ್ಥಾಪನೆ ಮಾಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

27 ಸಾವಿರ ಕೋಟಿ ರೂ.ವೆಚ್ಚದಲ್ಲಿ ಬೆಂಗಳೂರು ಬಿಸಿನೆಸ್‌ ಕಾರಿಡಾರ್‌ ಸ್ಥಾಪನೆ ಮಾಡಲಾಗುವುದು. ರಾಜ್ಯದ ಮೂರು ಜಿಲ್ಲೆಗಳಲ್ಲಿ ಆಹಾರ್‌ ಪಾರ್ಕ್‌ ನಿರ್ಮಾಣ ಮಾಡಲಾಗುವುದು. ಶಿವಮಗ್ಗ, ವಿಜಯಪುರ, ಬೆಂಗಳೂರು ಗ್ರಾಮಾಂತರ  ಜಿಲ್ಲೆಗಳಲ್ಲಿ ಆಹಾರ ಪಾರ್ಕ್‌ ನಿರ್ಮಾಣ ಮಾಡಲಾಗುವುದು ಎಂದು ಹೇಳಿದ್ದಾರೆ.

ಮರುಪಾವತಿ ಮಾಡುವ  ಮಹಿಳೆಯರಿಗೆ ಸರ್ಕಾರದಿಂದಲೇ ಶೇ. 6 ರಷ್ಟು ಬಡ್ಡಿ ಸಹಾಯಧನ ನೀಡಲಾಗುವುದು . ಮೇಕೆದಾಟು ಯೋಜನೆಗೆ ಪ್ರತ್ಯೇಕ ಯೋಜನಾ ವಿಭಾಗ ಸ್ಥಾಪನೆ  ಮಾಡಲಾಗುವುದು. ಬಹುನಿರೀಕ್ಷಿತ ಎತ್ತಿನಹೊಳೆ ಯೋಜನೆ ವಿಸ್ತರಣೆ ಮಾಡಲಾಗುವುದು ಎಂದು ತಿಳಿಸಿದಾರೆ.

ಸಮಗ್ರ ಕೃಷಿಯನ್ನು ಉತ್ತೇಜಿಸಲು ಕರ್ನಾಟಕ ರೈತ ಸಮೃದ್ಧಿ ಯೋಜನೆಯನ್ನು ಜಾರಿಗೊಳಿಸಲಾಗುತ್ತದೆ. ಬೆಂಗಳೂರಿನ ಗಾಂಧಿ ಕೃಷಿ ವಿಶ್ವವಿದ್ಯಾಲಯದ ಅಡಿಯಲ್ಲಿ ಬರುತ್ತಿದ್ದ ಮಂಡ್ಯದ ವಿ.ಸಿ. ಫಾರಂ ಕೃಷಿ ಕಾಲೇಜನ್ನು ಕೃಷಿ ವಿಶ್ವವಿದ್ಯಾಲಯವಾಗಿ ಮೇಲದರ್ಜೆಗೇರಿಸಲು ತೀರ್ಮಾನಿಸಲಾಗಿದೆ. ಈ ಹಿನ್ನೆಲೆಯಲ್ಲಿ ಮಂಡ್ಯ ಜಿಲ್ಲೆಯ ವಿ.ಸಿ. ಫಾರಂ ನಲ್ಲಿ ಕೃಷಿ ವಿಶ್ವವಿದ್ಯಾಲಯ ಸ್ಥಾಪಿಸುವ ಕುರಿತು ಪರಿಶೀಲಿಸಲು ತಜ್ಞರ ಸಮಿತಿ ರಚಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

Related News

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...