ಬೆಂಗಳೂರು : ರಾಜ್ಯ ಸರ್ಕಾರದಿಂದ ಬಡ ಜನತೆಗೆ ಗುಡ್ ನ್ಯೂಸ್ ನೀಡಿದ್ದು, 3 ಲಕ್ಷ ಮನೆ ನಿರ್ಮಾಣ ಮಾಡುವುದಾಗಿ ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ.
2024-25ನೇ ಸಾಲಿನಲ್ಲಿ 3 ಲಕ್ಷ ಮನೆಗಳನ್ನು ಪೂರ್ಣಗೊಳಿಸುವ ಗುರಿ ಹೊಂದಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಕೊಳೆಗೇರಿ ಅಭಿವೃದ್ಧಿ ಮಂಡಳಿ ಅಡಿಯಲ್ಲಿ ಪಿಎಂಎವೈ (ಎಎಚ್ ಪಿ) ಅಡಿಯಲ್ಲಿ 1,18,359 ಮನೆಗಳನ್ನು ನಿರ್ಮಿಸಲಾಗುತ್ತಿದೆ. ಬಡ ಕುಟುಂಬಗಳಿಗೆ ಸೇರಿದ ಹೆಚ್ಚಿನ ಫಲಾನುಭವಿಗಳು ತಮ್ಮ ವಂತಿಗೆಯಾದ 5 ಲಕ್ಷ ರೂ.ಗಳನ್ನು ಪಾವತಿಸಲು ಸಾಧ್ಯವಾಗದ ಕಾರಣ ಯೋಜನೆ ನಿಧಾನಗೊಂಡಿದೆ.
ಫಲಾನುಭವಿಗಳು ಪಾವತಿಸಬೇಕಾದ ವಂತಿಗೆಯನ್ನು ಒಂದು ಲಕ್ಷ ರೂಪಾಯಿಗಳಿಗೆ ಸೀಮಿತಗೊಳಿಸಲು ನಮ್ಮ ಸರ್ಕಾರ ನಿರ್ಧರಿಸಿದೆ. ಉಳಿದ ಫಲಾನುಭವಿಗಳ ಪಾಲು ಸುಮಾರು 4 ಲಕ್ಷ ರೂ.ಗಳನ್ನು ರಾಜ್ಯ ಸರ್ಕಾರ ನೀಡಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.