HomeKarnatakaBUDGET BREAKING : ರಾಜ್ಯದ 25 ಜಿಲ್ಲೆಗಳಲ್ಲಿ ʻಮಿನಿ ಜವಳಿ ಪಾರ್ಕ್ʼ ಸ್ಥಾಪನೆ : 10...

BUDGET BREAKING : ರಾಜ್ಯದ 25 ಜಿಲ್ಲೆಗಳಲ್ಲಿ ʻಮಿನಿ ಜವಳಿ ಪಾರ್ಕ್ʼ ಸ್ಥಾಪನೆ : 10 ಸಾವಿರ ಉದ್ಯೋಗ ಸೃಷ್ಟಿ ಗುರಿ

ಬೆಂಗಳೂರು : ರಾಜ್ಯದ 25 ಜಿಲ್ಲೆಗಳಲ್ಲಿ ಮಿನಿ ಜವಳಿ ಪಾರ್ಕ್‌ ಸ್ಥಾಪನೆ  ಮಾಡಲಾಗುವುದ, ಈ ಮೂಲಕ 10 ಸಾವಿರ ಉದ್ಯೋಗ ಸೃಷ್ಟಿಯ ಗುರಿ ಹೊಂದಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಇಂದು ಬಜೆಟ್‌ ಮಂಡನೆಯಲ್ಲಿ ಈ ಕುರಿತು ಘೋಷಣೆ ಮಾಡಿರುವ ಸಿಎಂ ಸಿದ್ದರಾಮಯ್ಯ ಅವರು,  ಮೈಸೂರು, ಕಿತ್ತೂರು ಕರ್ನಾಟಕದಲ್ಲಿ ಜವಳಿ ಪಾರ್ಕ್‌ ನಿರ್ಮಾಣ ಮಾಡಲಾಗುವುದು, ರಾಜ್ಯದ 25  ಜಿಲ್ಲೆಗಳಲ್ಲಿ ಮಿನಿ ಜವಳಿ ಪಾರ್ಕ್‌ ಸ್ಥಾಪನೆ ಮಾಡಲಾಗುವುದು. ಈ ಮೂಲಕ 10 ಸಾವಿರ ಜನರಿಗೆ ಉದ್ಯೋಗ ಸೃಷ್ಟಿಸುವ ಗುರಿ ಹೊಂದಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

ಮಂಡ್ಯದಲ್ಲಿ ಹೊಸ ಸಕ್ಕರೆ ಕಾರ್ಖಾನೆ ಸ್ಥಾಪನೆ ಮಾಡಲಾಗುವುದ, ಮಂಡ್ಯದ ಮೈಶುಗರ್‌ ಕಾರ್ಖಾನೆ ಆವರಣದಲ್ಲಿ ಹೊಸ ಸಕ್ಕರೆ ಕಾರ್ಖಾನೆ ನಿರ್ಮಾಣಕ್ಕೆ ಅನುದಾನ ನೀಡಲಾಗುವುದು ಎಂದು ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸ್ವಾಮಿ ವಿವೇಕಾನಂದರವರ ಜನ್ಮದಿನವಾದ ರಾಷ್ಟ್ರೀಯ ಯುವ ದಿನಾಚರಣೆದಂದು ಚಾಲನೆಗೊಂಡ ಯುವನಿಧಿ ಯೋಜನೆಯಡಿ ಪದವಿ ಪಡೆದು ಆರು ತಿಂಗಳಾದರೂ ನಿರುದ್ಯೋಗಿಗಳಾಗಿರುವ ಪದವೀಧರ ಯುವಕರಿಗೆ ಮಾಸಿಕ 3,000 ರೂ. ಹಾಗೂ ಡಿಪ್ಲೊಮಾ ಪಡೆದವರಿಗೆ 1,500 ರೂ. ನಿರುದ್ಯೋಗ ಭತ್ಯೆ ನೀಡಲಾಗುತ್ತಿದೆ. ನಿರುದ್ಯೋಗ ಭತ್ಯೆ ನೀಡುವುದರೊಂದಿಗೆ ಈ ಯುವಕರಿಗೆ ಕೌಶಲ್ಯಾಭಿವೃದ್ಧಿ ಇಲಾಖೆಯ ವತಿಯಿಂದ ಕೌಶಲ್ಯಾಭಿವೃದ್ಧಿ ತರಬೇತಿ ನೀಡಲಾಗುವುದು ಎಂದು ಸಿಎಂ ತಿಳಿಸಿದ್ದಾರೆ.

ಹಸಿವು ಮುಕ್ತ ಕರ್ನಾಟಕಕ್ಕೆ ರಾಜ್ಯ ಸರ್ಕಾರ ಹೊಸ ಹೆಜ್ಜೆ ಇಟ್ಟಿದ್ದು, ಅನ್ನ-ಸುವಿಧ ಯೋಜನೆ ಜಾರಿಗೆ ತರಲಾಗಿದ್ದು, ಈ ಮೂಲಕ ಹೋಮ್‌ ಡೆಲಿವರಿ ಆಯಪ್‌ ಮೂಲಕ ಮನೆ ಬಾಗಿಲಿಗೆ ಆಹಾರ ಧಾನ್ಯ ವಿತರಿಸಲಾಗುವುದು ಎಂದು ತಿಳಿಸಿದ್ದಾರೆ.

ರಾಜ್ಯದ ಯುವಕರ ಏಳಿಗೆಗೆ ಹಲವು ಯೋಜನೆಗಳನ್ನು ಜಾರಿಗೆ ತರಲಾಗುವುದು,, ಕಲಬುರಗಿ, ಕೊಪ್ಪಳದ ತರಬೇತಿ ಕೇಂದ್ರ, ವರುಣಾದಲ್ಲೂ ಅಭಿವೃದ್ಧಿ ಕೇಂದ್ರ ಸ್ಥಾಪಿಸಲಾಗುವುದು ಎಂದು ಹೇಳಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular