ಬೆಂಗಳೂರು : ರಾಜ್ಯದ ಸರ್ಕಾರಿ ನೌಕರರಿಗೆ ಸಿಎಂ ಸಿದ್ದರಾಮಯ್ಯ ಭರ್ಜರಿ ಗುಡ್ ನ್ಯೂಸ್ ನೀಡಿದ್ದು, 7 ನೇ ವೇತನ ಆಯೋಗದ ಬಗ್ಗೆ ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ ಮಾಡಿದ್ದಾರೆ.
ರಾಜ್ಯ ಸರ್ಕಾರಿ ನೌಕರರ ವೇತನ ಪರಿಷ್ಕರಣೆಗೆ ಏಳನೇ ವೇತನ ಆಯೋಗವನ್ನು ರಚಿಸಲಾಗಿದ್ದು, ಆಯೋಗದ ವರದಿ ಸ್ವೀಕರಿಸಿದ ನಂತರ ಪರಿಶೀಲಿಸಿ ಕ್ರಮವಹಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಬಜೆಟ್ ನಲ್ಲಿ ಘೋಷಣೆ ಮಾಡಿದ್ದಾರೆ.
ಹಾಗೂ ಗೃಹಲಕ್ಷ್ಮೀ ಯೋಜನೆಗೆ 28 ಸಾವಿರದ 608 ಕೋಟಿ ರೂಪಾಯಿ ಮೀಸಲು ಇಡಲಾಗುವುದು. 1.33 ಕೋಟಿ ಮಹಿಳೆಯರಿಗೆ ಯೋಜನೆಯಿಂದ ಲಾಭವಾಗಲಿದೆ. ಜನವರಿ 31ರವರೆಗೆ 1.27 ಕೋಟಿ ಮಹಿಳೆಯರ ನೋಂದಣಿಯಾಗಿದೆ, 11726 ಕೋಟಿ ನೇರವಾಗಿ ಮಹಿಳೆಯರ ಖಾತೆಗೆ ಹಣ ವರ್ಗಾವಣೆ ಮಾಡಲಾಗಿದೆ. ಗೃಹಲಕ್ಷ್ಮೀ ಯೋಜನೆಗೆ 28 ಸಾವಿರದ 608 ಕೋಟಿ ರೂಪಾಯಿ ಮೀಸಲು ಇಡಲಾಗುವುದು. 1.33 ಕೋಟಿ ಮಹಿಳೆಯರಿಗೆ ಯೋಜನೆಯಿಂದ ಲಾಭವಾಗಲಿದೆ. ಜನವರಿ 31ರವರೆಗೆ 1.27 ಕೋಟಿ ಮಹಿಳೆಯರ ನೋಂದಣಿಯಾಗಿದೆ, 11726 ಕೋಟಿ ನೇರವಾಗಿ ಮಹಿಳೆಯರ ಖಾತೆಗೆ ಹಣ ವರ್ಗಾವಣೆ ಮಾಡಲಾಗಿದೆ ಎಂದರು.