ಬೆಂಗಳೂರು : ರಾಜ್ಯದ ಎಲ್ಲಾ ಗ್ರಾಮ ಪಂಚಾಯಿತಿಗಳಲ್ಲಿ ಇ-ಆಫೀಸ್ ಆರಂಭಿಸಲಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ.
ಎಲ್ಲ ಗ್ರಾಮ ಪಂಚಾಯಿತಿಗಳಲ್ಲಿ ಇ-ಆಫೀಸ್ ಆರಂಭಿಸಲಾಗುತ್ತದೆ, ಗ್ರಾಮ ಪಂಚಾಯಿತಿಗಳ ಸಭೆ, ಕಾರ್ಯಕಲಾಪಗಳ ನೇರಪ್ರಸಾರ ಮಾಡಲಾಗುವುದು. ಪ್ರತಿ ತಾಲೂಕಿನಲ್ಲಿ ಕನಿಷ್ಠ 2ರಂತೆ ಬೂದುನೀರು ಸಂಸ್ಕರಣಾ ಘಟಕ ಸ್ಥಾಪನೆ ಮಾಡಲಾಗುವುದು, . ರಾಜ್ಯದ 50 ಗ್ರಾ.ಪಂ.ಗಳಿಗೆ ಹೊಂಬೆಳಕು ಕಾರ್ಯಕ್ರಮ ಆಯೋಜನೆ ಮಾಡಲಾಗುವುದು ಎಂದು ಸಿದ್ದರಾಮಯ್ಯ ಘೋಷಣೆ ಮಾಡಿದರು.
ಗುಲ್ಬರ್ಗಾ ವಿಶ್ವವಿದ್ಯಾಲಯದಲ್ಲಿ ಸೂಫಿ ಅಧ್ಯಯನ ಪೀಠ ಸ್ಥಾಪನೆ ಮಾಡಲಾಗುವುದು. ಅಕ್ಕಮಹಾದೇವಿ ಮಹಿಳಾ ವಿವಿಯಲ್ಲಿ ಸಿದ್ದರಾಮೇಶ್ವರ ಅಧ್ಯಯನ ಪೀಠ ರಚನೆ ಮಾಡಲಾಗುವುದು. . ರಾಜ್ಯದ ಕ್ರೀಡಾಪಟುಗಳಿಗೆ ಆರೋಗ್ಯ ವಿಮೆ ಸೌಲಭ್ಯ ಕಲ್ಪಿಸಲಾಗುವುದು. ರಾಷ್ಟ್ರೀಯ, ಅಂತಾರಾಷ್ಟ್ರೀಯ ಮಟ್ಟದ ಕ್ರೀಡಾಪಟುಗಳಿಗೆ ವಿಮೆ ಸೌಲಭ್ಯ ಕಲ್ಪಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು 2024-25ನೇ ಸಾಲಿನ ಕರ್ನಾಟಕ ಬಜೆಟ್ ಮಂಡನೆ ಮಾಡುತ್ತಿದ್ದಾರೆ. ಸಿದ್ದರಾಮಯ್ಯ ಅವರು ಮಂಡನೆ ಮಾಡುತ್ತಿರುವ 15ನೇ ಬಜೆಟ್ ಇದಾಗಿದೆ.