alex Certify ರಾಜ್ಯದ ಎಲ್ಲಾ ಸರ್ಕಾರಿ ಶಾಲೆ, ಕಾಲೇಜುಗಳಲ್ಲಿ ಉಚಿತ ವಿದ್ಯುತ್‌ : ಸಿಎಂ ಸಿದ್ದರಾಮಯ್ಯ ಘೋಷಣೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರಾಜ್ಯದ ಎಲ್ಲಾ ಸರ್ಕಾರಿ ಶಾಲೆ, ಕಾಲೇಜುಗಳಲ್ಲಿ ಉಚಿತ  ವಿದ್ಯುತ್‌ : ಸಿಎಂ ಸಿದ್ದರಾಮಯ್ಯ ಘೋಷಣೆ

ಬೆಂಗಳೂರು : ರಾಜ್ಯ ಸರ್ಕಾರವು ರಾಜ್ಯದ ಎಲ್ಲಾ ಸರ್ಕಾರಿ ಶಾಲೆ, ಕಾಲೇಜುಗಳಿಗೆ ಉಚಿತ ವಿದ್ಯುತ್‌ ನೀಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಘೋಷಿಸಿದ್ದಾರೆ.

ಬಜೆಟ್‌ ನಲ್ಲಿ ಈ ಕುರಿತು ಘೋಷಣೆ ಮಾಡಿರುವ ಸಿಎಂ ಸಿದ್ದರಾಮಯ್ಯ, ಸ್ವಾಮಿ ವಿವೇಕಾನಂದರವರ ಜನ್ಮದಿನವಾದ ರಾಷ್ಟ್ರೀಯ ಯುವ ದಿನಾಚರಣೆದಂದು ಚಾಲನೆಗೊಂಡ ಯುವನಿಧಿ ಯೋಜನೆಯಡಿ ಪದವಿ ಪಡೆದು ಆರು ತಿಂಗಳಾದರೂ ನಿರುದ್ಯೋಗಿಗಳಾಗಿರುವ ಪದವೀಧರ ಯುವಕರಿಗೆ ಮಾಸಿಕ 3,000 ರೂ. ಹಾಗೂ ಡಿಪ್ಲೊಮಾ ಪಡೆದವರಿಗೆ 1,500 ರೂ. ನಿರುದ್ಯೋಗ ಭತ್ಯೆ ನೀಡಲಾಗುತ್ತಿದೆ. ನಿರುದ್ಯೋಗ ಭತ್ಯೆ ನೀಡುವುದರೊಂದಿಗೆ ಈ ಯುವಕರಿಗೆ ಕೌಶಲ್ಯಾಭಿವೃದ್ಧಿ ಇಲಾಖೆಯ ವತಿಯಿಂದ ಕೌಶಲ್ಯಾಭಿವೃದ್ಧಿ ತರಬೇತಿ ನೀಡಲಾಗುವುದು ಎಂದು ಸಿಎಂ ತಿಳಿಸಿದ್ದಾರೆ.

ವಿವಿಧ ವಸತಿ ಯೋಜನೆಗಳಡಿ 10,000 ವಸತಿ ರಹಿತ ಮೀನುಗಾರರಿಗೆ ಮನೆ ನಿರ್ಮಿಸಲು ಕ್ರಮ ಕೈಗೊಳ್ಳಲಾಗುವುದು. ಮೀನುಗಾರರ ರಕ್ಷಣೆಗೆ ಸಮುದ್ರ ಆಂಬುಲೆನ್ಸ್ ಖರೀದಿಗೆ ರೂ.7 ಕೋಟಿ ಅನುದಾನ ಎಂದು ತಿಳಿಸಿದ್ದಾರೆ.

ಮೈಸೂರು, ಕಿತ್ತೂರು ಕರ್ನಾಟಕದಲ್ಲಿ ಜವಳಿ ಪಾರ್ಕ್‌ ನಿರ್ಮಾಣ ಮಾಡಲಾಗುವುದು, ರಾಜ್ಯದ 25  ಜಿಲ್ಲೆಗಳಲ್ಲಿ ಮಿನಿ ಜವಳಿ ಪಾರ್ಕ್‌ ಸ್ಥಾಪನೆ ಮಾಡಲಾಗುವುದು. ಈ ಮೂಲಕ 10 ಸಾವಿರ ಜನರಿಗೆ ಉದ್ಯೋಗ ಸೃಷ್ಟಿಸುವ ಗುರಿ ಹೊಂದಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

ಮಂಡ್ಯದಲ್ಲಿ ಹೊಸ ಸಕ್ಕರೆ ಕಾರ್ಖಾನೆ ಸ್ಥಾಪನೆ ಮಾಡಲಾಗುವುದ, ಮಂಡ್ಯದ ಮೈಶುಗರ್‌ ಕಾರ್ಖಾನೆ ಆವರಣದಲ್ಲಿ ಹೊಸ ಸಕ್ಕರೆ ಕಾರ್ಖಾನೆ ನಿರ್ಮಾಣಕ್ಕೆ ಅನುದಾನ ನೀಡಲಾಗುವುದು ಎಂದು ಹೇಳಿದ್ದಾರೆ.

ಸ್ವಾಮಿ ವಿವೇಕಾನಂದರವರ ಜನ್ಮದಿನವಾದ ರಾಷ್ಟ್ರೀಯ ಯುವ ದಿನಾಚರಣೆದಂದು ಚಾಲನೆಗೊಂಡ ಯುವನಿಧಿ ಯೋಜನೆಯಡಿ ಪದವಿ ಪಡೆದು ಆರು ತಿಂಗಳಾದರೂ ನಿರುದ್ಯೋಗಿಗಳಾಗಿರುವ ಪದವೀಧರ ಯುವಕರಿಗೆ ಮಾಸಿಕ 3,000 ರೂ. ಹಾಗೂ ಡಿಪ್ಲೊಮಾ ಪಡೆದವರಿಗೆ 1,500 ರೂ. ನಿರುದ್ಯೋಗ ಭತ್ಯೆ ನೀಡಲಾಗುತ್ತಿದೆ. ನಿರುದ್ಯೋಗ ಭತ್ಯೆ ನೀಡುವುದರೊಂದಿಗೆ ಈ ಯುವಕರಿಗೆ ಕೌಶಲ್ಯಾಭಿವೃದ್ಧಿ ಇಲಾಖೆಯ ವತಿಯಿಂದ ಕೌಶಲ್ಯಾಭಿವೃದ್ಧಿ ತರಬೇತಿ ನೀಡಲಾಗುವುದು ಎಂದು ಸಿಎಂ ತಿಳಿಸಿದ್ದಾರೆ.

ಹಸಿವು ಮುಕ್ತ ಕರ್ನಾಟಕಕ್ಕೆ ರಾಜ್ಯ ಸರ್ಕಾರ ಹೊಸ ಹೆಜ್ಜೆ ಇಟ್ಟಿದ್ದು, ಅನ್ನ-ಸುವಿಧ ಯೋಜನೆ ಜಾರಿಗೆ ತರಲಾಗಿದ್ದು, ಈ ಮೂಲಕ ಹೋಮ್‌ ಡೆಲಿವರಿ ಆಯಪ್‌ ಮೂಲಕ ಮನೆ ಬಾಗಿಲಿಗೆ ಆಹಾರ ಧಾನ್ಯ ವಿತರಿಸಲಾಗುವುದು ಎಂದು ತಿಳಿಸಿದ್ದಾರೆ.

ರಾಜ್ಯದ ಯುವಕರ ಏಳಿಗೆಗೆ ಹಲವು ಯೋಜನೆಗಳನ್ನು ಜಾರಿಗೆ ತರಲಾಗುವುದು,, ಕಲಬುರಗಿ, ಕೊಪ್ಪಳದ ತರಬೇತಿ ಕೇಂದ್ರ, ವರುಣಾದಲ್ಲೂ ಅಭಿವೃದ್ಧಿ ಕೇಂದ್ರ ಸ್ಥಾಪಿಸಲಾಗುವುದು ಎಂದು ಹೇಳಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...