ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಅವರು ಇಂದು ಕರ್ನಾಟಕದ 2024-25ನೇ ಸಾಲಿನ ಬಜೆಟ್ (Karnataka Budget) ಮಂಡಿಸುತ್ತಿದ್ದಾರೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ
ಸಿಎಂ ಸಿದ್ದರಾಮಯ್ಯ ಅವರು ಮಂಡಿಸಿರುವ ಬಜೆಟ್ ನಲ್ಲಿ ಆರೋಗ್ಯ ಇಲಾಖೆಗೆ ಸಿಹಿಸುದ್ದಿ ನೀಡಿದ್ದು, ಹಲವು ಮಹತ್ವದ ಘೋಷಣೆಗಳನ್ನು ಮಾಡಿದ್ದಾರೆ.
- ಏಳು ಜಿಲ್ಲೆಗಳಲ್ಲಿ 187 ಕೋಟಿ ರೂ. ವೆಚ್ಚದಲ್ಲಿ ಕ್ರಿಟಿಕಲ್ ಕೇರ್ ಬ್ಲಾಕ್ ಕಟ್ಟಡ ನಿರ್ಮಾಣ
- 280 ಕೋಟಿ ರೂ. ವೆಚ್ಚದಲ್ಲಿ ಏಳು ತಾಲ್ಲೂಕುಗಳಲ್ಲಿ 100 ಹಾಸಿಗೆ ಸಾಮರ್ಥ್ಯದ ತಾಲ್ಲೂಕು ಆಸ್ಪತ್ರೆ ನಿರ್ಮಾಣ.
- ಇಲಾಖೆಯ ಶಿಥಿಲಾವಸ್ಥೆಯಲ್ಲಿರುವ ಕಟ್ಟಡಗಳ ದುರಸ್ತಿ ಮತ್ತು ಉನ್ನತೀಕರಣಕ್ಕೆ 75 ಕೋಟಿ ರೂ. ಅನುದಾನ
- ಬೆಂಗಳೂರಿನ ಕೆ.ಸಿ. ಜನರಲ್ ಆಸ್ಪತ್ರೆ ಆವರಣದಲ್ಲಿ ತಾಯಿ ಮತ್ತು ಮಕ್ಕಳ ಆಸ್ಪತ್ರೆ ಕಟ್ಟಡ 150 ಕೋಟಿ ರೂ. ಅನುದಾನ
- ಎರಡು ವರ್ಷಗಳಲ್ಲಿ 350 ಕೋಟಿ ರೂ. ವೆಚ್ಚದಲ್ಲಿ 25 ಪ್ರಾಥಮಿಕ ಆರೋಗ್ಯ ಕೇಂದ್ರ ಉನ್ನತೀಕರಣ.
ಕಲ್ಯಾಣ ಕರ್ನಾಟಕ ಭಾಗದಲ್ಲಿ 221 ಕೋಟಿ ರೂ. ವೆಚ್ಚದಲ್ಲಿ 46 ಹೊಸ ಪ್ರಾಥಮಿಕ ಆರೋಗ್ಯ ಕೇಂದ್ರಗಳ ಸ್ಥಾಪನೆ.
ರಾಜ್ಯದ ಗ್ರಾಮೀಣ ಪ್ರದೇಶಗಳಲ್ಲಿ 199 ಉಪಕೇಂದ್ರಗಳನ್ನು ಆರೋಗ್ಯ ಕ್ಷೇಮ ಕೇಂದ್ರಗಳ ಕಟ್ಟಡಕ್ಕಾಗಿ 130 ಕೋಟಿ ರೂ. ಅನುದಾನ.
20 ಕೋಟಿ ರೂ. ವೆಚ್ಚದಲ್ಲಿ ಪ್ರತಿ ಜಿಲ್ಲೆಯಲ್ಲಿ ಒಂದು ಡೇ-ಕೇರ್ ಕಿಮೋಥೆರಪಿ ಕೇಂದ್ರ ಸ್ಥಾಪನೆ.
20 ಜಿಲ್ಲಾ ಆಸ್ಪತ್ರೆಗಳಲ್ಲಿ Digital Mammography ಯಂತ್ರಗಳನ್ನು ಮತ್ತು ಕೆ.ಸಿ. ಜನರಲ್ ಆಸ್ಪತ್ರೆ ಬೆಂಗಳೂರು ಹಾಗೂ ಉಡುಪಿ, ಕೋಲಾರ ಮತ್ತು ದಾವಣಗೆರೆ ಜಿಲ್ಲಾ ಆಸ್ಪತ್ರೆಗಳಿಗೆ Colposcopy ಉಪಕರಣ ಖರೀದಿಗೆ 21 ಕೋಟಿ ರೂ. ಅನುದಾನ
13 ಜಿಲ್ಲಾ ಆಸ್ಪತ್ರೆಗಳಲ್ಲಿ ಅಗ್ನಿಶಾಮಕ ವ್ಯವಸ್ಥೆಯನ್ನು ಒದಗಿಸಲು 6 ಕೋಟಿ ರೂ. ಅನುದಾನ.