ಬೆಂಗಳೂರು : ರಾಜ್ಯದಲ್ಲಿ ಏ. 1 ರಿಂದ ಹೊಸ ಎಪಿಎಲ್ ಹಾಗೂ ಬಿಪಿಎಲ್ ಕಾರ್ಡ್ ಗೆ ಅರ್ಜಿ ಸಲ್ಲಿಕೆ ಆರಂಭವಾಗಲಿದೆ ಎಂದು ರಾಜ್ಯ ಸರ್ಕಾರ ಪ್ರಕಟಣೆ ಹೊರಡಿಸಿದೆ.
ಹೊಸ ಆದ್ಯತಾ ಪಡಿತರ ಚೀಟಿಯನ್ನು ಕೋರಿ ಸಲ್ಲಿಸಲಾಗಿರುವ 2,95,986 ಅರ್ಜಿಗಳನ್ನು ಇದೇ ಮಾರ್ಚ್ 31ರೊಳಗೆ ವಿಲೇವಾರಿ ಮಾಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಏಪ್ರಿಲ್ 1ರಿಂದ ಹೊಸ ಪಡಿತರ ಚೀಟಿಗೆ ಅರ್ಜಿ ಆಹ್ವಾನಿಸಲಾಗಿದೆ ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಹಾಗೂ ಕಾನೂನು ಮಾಪನಾಶಾಸ್ತ್ರ ಇಲಾಖಾ ಸಚಿವ ಕೆ.ಎಚ್.ಮುನಿಯಪ್ಪ ಅವರು ತಿಳಿಸಿದ್ದಾರೆ.
ಗ್ರಾಮೀಣ ಪ್ರದೇಶದಲ್ಲಿ ಕುಟುಂಬದ ಆದಾಯ1.20 ಲಕ್ಷ ರೂಪಾಯಿಗಿಂತ ಹೆಚ್ಚಿದ್ದರೆ ಅಂತಹವರನ್ನು ಬಿಪಿಎಲ್ ಚೀಟಿಯಿಂದ ಹೊರಗಿಡಲಾಗುವುದು ಎಂದು ಸಚಿವರು ಮಾಹಿತಿ ನೀಡಿದ್ದಾರೆ.