ಶಿವಮೊಗ್ಗ : ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು ಮಹಿಳೆಯರ ಮೇಲಿನ ವರದಕ್ಷಿಣೆ. ಕಿರುಕುಳ, ಅತ್ಯಾಚಾರ, ಲೈಂಗಿಕ ಕಿರುಕುಳ, ದೌರ್ಜನ್ಯ ಹಾಗೂ ಇನ್ನಿತರ ರೀತಿಯ ದೌರ್ಜನ್ಯಕ್ಕೆ ಒಳಗಾಗಿ ದೈಹಿಕ ಹಾಗೂ ಮಾನಸಿಕವಾಗಿ ಹಿಂಸೆಯನ್ನು ಅನುಭವಿಸುತ್ತಿರುವ ಮಹಿಳೆಯರಿಗೆ ಸ್ವಯಂ ಸೇವಾ ಸಂಸ್ಥೆಗಳ ಮೂಲಕ ಕಾನೂನು ಸಲಹೆ, ಆರ್ಥಿಕ ಪರಿಹಾರ, ತಾತ್ಕಾಲಿಕ ಆಶ್ರಯ, ರಕ್ಷಣೆ ನೀಡುವುದರ ಜೊತೆಗೆ ಸ್ವಾವಲಂಭನೆ ಸಾಧಿಸಲು ತರಬೇತಿ ನೀಡುವುದರೊಂದಿಗೆ ಇಂತಹ ಮಹಿಳೆಯರು ಸಮಾಜದಲ್ಲಿ ಇತರೆ ಮಹಿಳೆಯರಂತೆ ಧೈರ್ಯವಾಗಿ ಬದುಕುವಂತೆ ಸಶಕ್ತರನ್ನಾಗಿ ಮಾಡುವ ಉದ್ದೇಶ ಹೊಂದಿದ್ದು, ಅರ್ಹ ಸ್ವಯಂ ಸೇವಾ ಸಂಸ್ಥೆಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತ ಸ್ವಯಂಸೇವಾ ಸಂಸ್ಥೆಗಳು ನಿಗಧಿತ ನಮೂನೆ ಅರ್ಜಿಯನ್ನು ಉಪನಿರ್ದೇಶಕರ ಕಚೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಆಲ್ಕೊಳ, ಶಿವಮೊಗ್ಗ ಇಲ್ಲಿ ಪಡೆದು, ಭರ್ತಿ ಮಾಡಿದ ಅರ್ಜಿಯನ್ನು ಸೂಕ್ತ ದಾಖಲೆಗಳೊಂದಿಗೆ ಫೆ. 29 ರೊಳಗಾಗಿ ಸಲ್ಲಿಸುವಂತೆ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.ಹೆಚ್ಚಿನ ಮಾಹಿತಿಗಾಗಿ ಇಲಾಖಾ ಕಚೇರಿಯನ್ನು ಖುದ್ದಾಗಿ ಅಥವಾ ದೂ.ಸಂ.: 08182-295514 ನ್ನು ಸಂಪರ್ಕಿಸುವುದು.