ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ವೈಫಲ್ಯ ಮುಚ್ಚಿಕೊಳ್ಳಲು ಸುಳ್ಳಿನ ಕಂತೆಯ ರಾಜಕೀಯ ಬಜೆಟ್ ಮಂಡಿಸಿದ್ದಾರೆ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಆರೋಪಿಸಿದರು.
ಇಂದು ಮಂಡಿಸಿದ ಬಜೆಟ್ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ ಸಿದ್ದರಾಮಯ್ಯ ಮಾಜಿ ಸಿಎಂ ಬೊಮ್ಮಾಯಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ವೈಫಲ್ಯ ಮುಚ್ಚಿಕೊಳ್ಳಲು ಸುಳ್ಳಿನ ಕಂತೆಯ ರಾಜಕೀಯ ಬಜೆಟ್ ಮಂಡಿಸಿದ್ದಾರೆ, 15ನೇ ಬಾರಿ ಬಜೆಟ್ ಮಂಡಿಸಿ 1.5 ಲಕ್ಷ ಕೋಟಿ ಸಾಲ ಮಾಡಿರುವ ದಾಖಲೆ ಸೃಷ್ಟಿಸುವ ಮೂಲಕ ತಮ್ಮ ವೈಫಲ್ಯ ಮುಚ್ಚಿಕೊಳ್ಳಲು ಸುಳ್ಳಿನ ಕಂತೆಯ ರಾಜಕೀಯ ಬಜೆಟ್ ಮಂಡಿಸಿದ್ದಾರೆ ಎಂದರು.
ಬಜೆಟ್ ನಲ್ಲಿ ಕೇಂದ್ರ ಸರ್ಕಾರವನ್ನು ವಿರೋಧಿಸುತ್ತಿರುವುದು ರಾಜಕೀಯ ಕಾರಣಕ್ಕೆ. ರಾಜಕೀಯಕ್ಕಾಗಿ ಬಜೆಟ್ ಬಳಸಿಕೊಂಡಿರುವುದು ಖಂಡನೀಯ ಎಂದರು.ಕೇಂದ್ರ ಸರ್ಕಾರದಿಂದ ಬರುವ ಅನುದಾನ ಸಂಪೂರ್ಣ ಬಂದಿದೆ. ಇವರ ತೆರಿಗೆ ಸಂಗ್ರಹದಲ್ಲಿ ಕೊರತೆಯಾಗಿದೆ. ಅದನ್ಮು ಮುಚ್ಚಿಡಲು ಸುಳ್ಳಿನ ಕಂತೆಯ ಬಜೆಟ್ ಮಂಡನೆ ಮಾಡಿದ್ದಾರೆ ಎಂದರು.