ನವದೆಹಲಿ: ಲೋಕಸಭಾ ಚುನಾವಣೆಯ ಕಾವು ದಿನದಿಂದ ದಿನಕ್ಕೆ ತೀವ್ರಗೊಳ್ಳುತ್ತಿದ್ದು, ಪ್ರಿಯಾಂಕಾ ಗಾಂಧಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಪಕ್ಷದ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಅನಾರೋಗ್ಯದ ಕಾರಣ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ಹೇಳಲಾಗುತ್ತಿದೆ. ಈ ಕಾರಣದಿಂದಾಗಿ ಅವರು ಇಂದು (ಶುಕ್ರವಾರ) ಉತ್ತರ ಪ್ರದೇಶದ ಚಂದೌಲಿಯಲ್ಲಿ ನಡೆಯಲಿರುವ ಭಾರತ್ ಜೋಡೋ ನ್ಯಾಯ್ ಯಾತ್ರೆಯಲ್ಲಿ ಭಾಗವಹಿಸಲು ಸಾಧ್ಯವಾಗಿಲ್ಲ.
ಮೂಲಗಳಿಂದ ಪಡೆದ ಮಾಹಿತಿಯ ಪ್ರಕಾರ, ಪ್ರಿಯಾಂಕಾ ಗಾಂಧಿ ತಮ್ಮ ಸಹೋದರ ರಾಹುಲ್ ಗಾಂಧಿ ಅವರೊಂದಿಗೆ ಚಂದೌಲಿಯಲ್ಲಿ ನ್ಯಾಯ ಯಾತ್ರೆಯಲ್ಲಿ ಭಾಗವಹಿಸಬೇಕಿತ್ತು. ಆದರೆ ಅನಾರೋಗ್ಯದ ಕಾರಣ ಪ್ರಿಯಾಂಕಾ ಗಾಂಧಿ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ಮೂಲಗಳು ಮಾಹಿತಿ ನೀಡಿದೆ.