![](https://kannadadunia.com/wp-content/uploads/2023/11/Sanitation-workers.jpg)
ಬೆಂಗಳೂರು :ಖಾಯಾಮಾತಿ ನಿರೀಕ್ಷೆಯಲ್ಲಿದ್ದ ಪೌರಕಾರ್ಮಿಕರಿಗೆ ರಾಜ್ಯ ಸರ್ಕಾರವು ಸಿಹಿಸುದ್ದಿ ನೀಡಿದ್ದು, ಪೌರಕಾರ್ಮಿಕರ ಬಹುಕಾಲದ ಬೇಡಿಕೆಯನ್ನು ಈಡೇರಿಸಲು ನಿರ್ಧರಿಸಿದೆ.
ಈ ಕುರಿತು ಬಜೆಟ್ ನಲ್ಲಿ ಸಿಎಂ ಸಿದ್ದರಾಮಯ್ಯ ಮಾಹಿತಿ ನೀಡಿದ್ದು, ನೇರಪಾವತಿಯಡಿ ಕೆಲಸ ನಿರ್ವಹಿಸುತ್ತಿರುವ 24,005 ಪೌರಕಾರ್ಮಿಕರ ಸೇವೆ ಖಾಯಂಗೊಳಿಸಲು ಸರ್ಕಾರದಿಂದ ಅನುಮೋದನೆ ನೀಡಲಾಗಿದೆ. ಜೊತೆಗೆ ಬಾಕಿ ಉಳಿದಿರುವ ಪೌರ ಕಾರ್ಮಿಕರನ್ನು ಹಂತಹಂತವಾಗಿ ಖಾಯಂಗೊಳಿಸಲು ಕ್ರಮ ಕೈಗೊಳ್ಳುತ್ತೇವೆ ಎಂದು ತಿಳಿಸಿದ್ದಾರೆ.
ಜೀತ ಕಾರ್ಮಿಕ ಪದ್ಧತಿಯಿಂದ ಬಿಡುಗಡೆಗೊಂಡ ಕಾರ್ಮಿಕರ ಪುನರ್ವಸತಿಗಾಗಿ ನೀಡುವ ಮಾಸಿಕ ಪ್ರೋತ್ಸಾಹಧನ 2,000 ರೂ.ಗಳಿಗೆ ಹೆಚ್ಚಳ ಮಾಡಲಾಗುವುದು ಎಂದು ತಿಳಿಸಿದ್ದಾರೆ.